ಬೆಂಗಳೂರು:ಕೆಲವು ವರ್ಷಗಳಿಂದ ಬಿಜೆಪಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಅವರು ತಮ್ಮ ರಾಜಕೀಯ ನಿವೃತ್ತಿಯ ಕುರಿತು ಇಂದು ಲಘುಧಾಟಿಯಲ್ಲಿ ಮನಬಿಚ್ಚಿ ಮಾತನಾಡಿದ್ದಾರೆ.
ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರ ಜತೆ ಮಾತನಾಡಿದರು. ‘‘ನಿಮ್ಮನ್ನು ಪಕ್ಷದಲ್ಲಿ ಕಡೆಗಣಿಸಿದಂತಾಗಿದೆಯಲ್ಲ, ನೀವು ರಾಜಕೀಯ ನಿವೃತ್ತಿ ಪಡೆದಿದ್ದೀರಾ?’’ ಎಂಬ ವರದಿಗಾರರ ಪ್ರಶ್ನೆಗೆ, ‘‘ನಾನು ರಾಜಕೀಯದಿಂದ ದೂರ ಉಳಿದು ಈಗಾಗಲೇ ಹಲವಾರು ದಿನಗಳು ಕಳೆದಿವೆ. ರಾಜಕೀಯದಿಂದ ನಾನು ನಿವೃತ್ತಿ ಪಡೆಯುತ್ತಿದ್ದೇನೆ. ಈ ವಿಷಯವನ್ನು ಪಕ್ಷದ ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ. ಅವರ ಗಮನಕ್ಕೆ ತಂದರೆ ಅವರೇನು ನನಗೆ ಪಿಂಚಣಿ ಕೊಡುತ್ತಾರೆಯೇ? ಆರೋಗ್ಯದ ಕಾರಣಗಳಿಗಾಗಿ ನಾನೇ ಪಕ್ಷದ ಚಟುವಟಿಕೆಗಳಿಂದ ದೂರವಿದ್ದೇನೆ. ಹಾಗಾಗಿ ಪಕ್ಷ ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’’ ಎಂದರು.
‘‘ನನಗೆ ಈಗಾಗಲೇ 90 ವರ್ಷ ವಯಸ್ಸಾಗಿದೆ. 50 ವರ್ಷ ವಯಸ್ಸಾದವನಂತೆ ನಟಿಸಲು ನಾನು ಸಿದ್ಧನಿಲ್ಲ. ವಯಸ್ಸನ್ನು ಪರಿಗಣಿಸಿ ನಾನು ರಾಜಕೀಯದಿಂದ ದೂರ ಸರಿಯುತ್ತಿದ್ದೇನೆ’’ ಎಂದು ಸ್ಪಷ್ಟಪಡಿಸಿದರು.
ಸಂಸಾರ ನಿಭಾಯಿಸಲಿಕ್ಕೂ ಇಲ್ಲಿದೆ ಒಂದು ಕೋರ್ಸ್​; ಮದುವೆ ಆಗುವವರಿಗೂ-ಆದವರಿಗೂ ನೀಡ್ತಾರೆ ತರಬೇತಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − six =
Remember me
