ಮಂಗಳೂರು:ಅಂತರಾಷ್ಟ್ರೀಯ ವಿಮಾನದಲ್ಲಿ ಬಂದಿದ್ದ ಪ್ರಯಾಣಿಕ ಸ್ಮಗ್ಲರ್​ನೊಬ್ಬ ತನ್ನ 21 ತಿಂಗಳ ಮಗಳ ಡೈಪರ್‌ನಲ್ಲಿ ಚಿನ್ನವನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದಾಗ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಎಂಐಎ) ಸಿಕ್ಕಿಬಿದ್ದಿದ್ದಾನೆ ಎಂದು ಕಸ್ಟಮ್ಸ್ ಪ್ರಕಟಣೆ ಶನಿವಾರ ತಿಳಿಸಿದೆ.
ಪೇಸ್ಟ್ ರೂಪದಲ್ಲಿ ಚಿನ್ನವನ್ನು ಡಯಾಪರ್ ಒಳಗೆ ಚೀಲಗಳಲ್ಲಿ ಇರಿಸಲಾಗಿತ್ತು. ಇದರಿಂದಾಗಿ ಅದು ಮಗುವಿನ ಮಲ ಎಂದು ಅಧಿಕಾರಿಗಳು ಅಂದುಕೊಳ್ಳುತ್ತಾರೆ ಎಂದು ಭಾವಿಸಿದ್ದ ಎಂದು ಕಾಣುತ್ತದೆ. ಆದರೆ, ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಈ ವಿಚಿತ್ರ ವಿಧಾನ ಪತ್ತೆಯಾಗಿದೆ.
ಇದನ್ನೂ ಓದಿ:ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್
ಇನ್ನೊಂದು ಘಟನೆಯಲ್ಲಿ ಪುರುಷ ಪ್ರಯಾಣಿಕನೊಬ್ಬ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟು ತನ್ನ ಸೊಂಟಕ್ಕೆ ಬೆಲ್ಟ್‌ನಂತೆ ಕಟ್ಟಿಕೊಂಡಿದ್ದ. ಇನ್ನೊಬ್ಬ ವ್ಯಕ್ತಿ ತನ್ನ ಗುದನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟಿದ್ದ.
ಒಟ್ಟಾರೆಯಾಗಿ, ಎಂಐಎಯ ಕಸ್ಟಮ್ಸ್ ಅಧಿಕಾರಿಗಳು ಈ ವರ್ಷದ ಮಾರ್ಚ್ 1 ರಿಂದ 15 ರವರೆಗೆ 90.67 ಲಕ್ಷ ರೂಪಾಯಿ ಮೌಲ್ಯದ 1,606 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 8 =
Remember me
