ಬಳ್ಳಾರಿ:ನರೇಗಾ ಕೆಲಸದ ಸ್ಥಳದಲ್ಲಿ ಹಾವುಗಳ ರಾಶಿ ಕಂಡುಬಂದಿದ್ದು, ಇಬ್ಬರಿಗೆ ಹಾವು ಕಚ್ಚಿರುವುದರಿಂದ ಕಾರ್ಮಿಕರು ಕಂಗಾಲಾಗಿರುವ ಪ್ರಸಂಗವೂ ನಡೆದಿದೆ. ಬಳ್ಳಾರಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗಿದ್ದ ಸಹೋದರಿಯರಿಬ್ಬರ ಸಾವು!
ಬಳ್ಳಾರಿ ತಾಲೂಕಿನ ಎತ್ತಿನ ಬೂದಿಹಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನರೇಗಾ ಕೆಲಸದ ಸ್ಥಳದಲ್ಲಿದ್ದ ಕೂಲಿ ಕಾರ್ಮಿಕರಾದ ಗೋಡೆಹಾಳ್ ಬಸಮ್ಮ, ಹರಿಜನ ದುರ್ಗಮ್ಮ ಎಂಬವರಿಗೆ ಹಾವು ಕಚ್ಚಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಭ್ರಷ್ಟ ಅಧಿಕಾರಿಗೆ 15 ವರ್ಷಗಳ ಬಳಿಕ 2 ವರ್ಷ ಸಜೆ, 60 ಲಕ್ಷ ರೂ. ದಂಡ!
ಒಂದೇ ಸ್ಥಳದಲ್ಲಿ 20ಕ್ಕೂ ಹೆಚ್ಚು ಹಾವುಗಳ ರಾಶಿಯೇ ಕಂಡುಬಂದಿದ್ದು, ಅದನ್ನು ನೋಡಿದ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ. ಮಾತ್ರವಲ್ಲ, ಇಬ್ಬರು ಅದರ ಕಡಿತಕ್ಕೆ ಒಳಗಾದ್ದರಿಂದ ಆತಂಕಗೊಂಡಿದ್ದಾರೆ. ನೋಡಿದ ಕಾರ್ಮಿಕರು. ಹಾವು ಕಡಿತಕ್ಕೆ ಒಳಗಾದವರಿಗೆ ವೈದ್ಯಕೀಯ ವೆಚ್ಚ ಮತ್ತು ಪರಿಹಾರ ಧನ ನೀಡಲು ಒತ್ತಾಯಿಸಿರುವ ಅವರು ಕೆಲಸದ ಸ್ಥಳ ಬದಲಿಸುವಂತೆಯೂ ತಾಲೂಕು ಪಂಚಾಯತ್ ಇಒಗಳಿಗೆ ಮನವಿ ಮಾಡಿದ್ದಾರೆ.
ಬಿಜೆಪಿಯಿಂದ ಮಾತ್ರ ಕರ್ನಾಟಕ-ಕರಾವಳಿಯ ರಕ್ಷಣೆ: ಅಮಿತ್ ಷಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 3 =
Remember me
