ಬೆಂಗಳೂರು:ಬಿಹಾರದಲ್ಲಿ ಜಾತಿಗಣತಿ ವರದಿ ನಿನ್ನೆ ಬಿಡುಗಡೆ ಆಗಿದ್ದು, ಅದರ ಬೆನ್ನಿಗೇ ಕರ್ನಾಟಕದಲ್ಲೂ ವರದಿಯೊಂದರ ಬಿಡುಗಡೆಗೆ ಇಲ್ಲಿನ ಸರ್ಕಾರ ಸಜ್ಜಾಗುತ್ತಿರುವಂತೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯೊಂದನ್ನು ಇಂದು ಹಂಚಿಕೊಂಡಿದ್ದಾರೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬೇಕೆಂದು ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶಿಸಿದ್ದೆ. ಆಗ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಆಗ ನಮ್ಮ ಸರ್ಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ ಎಂದು ಸಿಎಂ ತಿಳಿಸಿದ್ದಾರೆ.
ಈ ಕುರಿತಂತೆ ಇನ್ನಷ್ಟು ಮಾಹಿತಿ ಹಂಚಿಕೊಂಡಿರುವ ಅವರು, ನಮ್ಮ ನಂತರ ಸಮ್ಮಿಶ್ರ ಸರ್ಕಾರ ಬಂದಿದ್ದು ಅಂದಿನ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ವರದಿ ಸ್ವೀಕರಿಸಲಿಲ್ಲ. ನಂತರ ಆಯೋಗಕ್ಕೆ ಜಯಪ್ರಕಾಶ್ ಹೆಗ್ಡೆಯವರನ್ನು ಬಿಜೆಪಿ ಸರ್ಕಾರ ನೇಮಿಸಿತ್ತು. ಅವರಿಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗಾಗಲೇ ತಿಳಿಸಲಾಗಿದ್ದು, ಆ ವರದಿ ಕೈಸೇರಿದ ಬಳಿಕ ಪರಿಶೀಲಿಸಲಾಗುವುದು ಎಂದಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸದ್ಯದಲ್ಲೇ ಬಿಡುಗಡೆ ಆಗಲಿದೆಯೇ ಎಂಬ ಕುತೂಹಲ ಮೂಡಿದೆ.
ಸಿನಿಮಾದ ಹಲವರಿಗೆ ಸಾಹಿತ್ಯದ ಅರಿವಿಲ್ಲ; ನೀವಂದ್ಕೊಂಡಷ್ಟು ಮೂರ್ಖರಲ್ಲ ಸಿನಿಮಾದವರು: ಸಾಹಿತಿ-ನಿರ್ದೇಶಕರ ಮಧ್ಯೆ ಜಾತಿಸಂಘರ್ಷ

ಎಲಾನ್​ ಮಸ್ಕ್​ನ ಒಂದು ಸೆಕೆಂಡ್​ನ ಆದಾಯ ಎಷ್ಟು?; ಒಂದು ರಾತ್ರಿಯ ಸಂಪಾದನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − fifteen =
Remember me
