ಧಾರವಾಡ:ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸೈನಿಕರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಧಾರವಾಡ ಹೊರವಲಯದ ಯರಿಕೊಪ್ಪ‌ ಬೈಪಾಸ್ ಬಳಿ ಉಂಟಾದ ಈ ಅಪಘಾತದಲ್ಲಿ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹೈದರಾಬಾದ್​ ಆರ್ಮಿ ಸೆಂಟರ್​ನಲ್ಲಿ ನಾಯಕ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಸಂತರಾಜ್ (45) ಮೃತಪಟ್ಟ ಸೈನಿಕ. ಇವರು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೂದಿಹಾಳ ಗ್ರಾಮದ ನಿವಾಸಿ.
ಇಂದು ಬೆಂಗಳೂರಿನಿಂದ ಇವರು ತಮ್ಮ ಊರಾದ ಬೆಳಗಾವಿಗೆ ಹೋಗುತ್ತಿದ್ದಾಗ ಧಾರವಾಡ ಹೊರವಲಯದ ಯರಿಕೊಪ್ಪ‌ ಬೈಪಾಸ್ ಬಳಿ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ವಸಂತರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಉಂಟಾಗಿದೆ.
ಮತ್ತೆ ಬಣ್ಣ ಹಚ್ಚಿದ್ರು ನಟಿ ನೀತೂ ಶೆಟ್ಟಿ; ಈಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಕುಂಜೆ..
Video | ಮೊಬೈಲ್​ಫೋನ್​ ನೋಡುತ್ತಲೇ ಬಸ್​ ಚಲಾಯಿಸಿದ ಚಾಲಕ; ಪ್ರಯಾಣಿಕರು ಆಕ್ಷೇಪಿಸಿದ್ದರೂ ಡೋಂಟ್​ ಕೇರ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − seven =
Remember me
