ಚಾಮರಾಜನಗರ:18ನೇ ಸುತ್ತಿನ ಮತ ಎಣಿಕೆ ಕೊನೆಯ ಸುತ್ತಾಗಿದ್ದು ಇದೀಗ ಚಾಮರಾಜನಗರದಲ್ಲಿ ಮತ ಎಣಿಕೆ ಮುಕ್ತಾಯವಾಗಿದೆ. ಪುಟ್ಟರಂಗಶೆಟ್ಟಿ ಬರೋಬ್ಬರಿ 7,383 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಈ ಮೂಲಕ ಸೋಮಣ್ಣ ಮುಖಭಂಗವನ್ನು ಅನುಭವಿಸಿದ್ದಾರೆ.
ಪುಟ್ಟರಂಗಶೆಟ್ಟಿ 83,136 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ವಿ.ಸೋಮಣ್ಣ 75,753 ಮತಗಳನ್ನು ಗಳಿಸಿದ್ದಾರೆ. ಇನ್ನು ಬಿಎಸ್ ಪಿಯ ಹ.ರಾ.ಮಹೇಶ್ 6,373 ಮತಗಳನ್ನು ಪಡೆದರೆ, ಜೆಡಿಎಸ್ ನ ಮಲ್ಲಿಕಾರ್ಜುನ ಸ್ವಾಮಿ 1,073 ಮತಗಳನ್ನು ಪಡೆದಿದ್ದಾರೆ. ಹೀಗೆ ಸೋಮಣ್ಣ ಚಾಮರಾಜನಗರದಲ್ಲಿ ಸೋತಿದ್ದಾರೆ.

ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 31 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + nine =
Remember me
