ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ಕೆಲ ಮಾಧ್ಯಮಗಳು ಕಾವಲು ನಾಯಿಗಳ ಹಾಗೆ ಕೆಲಸ ಮಾಡದೆ ಸಾಕುನಾಯಿಗಳಂತೆ ವರ್ತಿಸುತ್ತಿರುವುದು ಆತಂಕದ ವಿಷಯ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಹೇಳಿದ್ದಾರೆ.
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಶುಕ್ರವಾರ ಏರ್ಪಡಿಸಿದ್ದ ‘ಸಂಘದ 70ನೇ ವರ್ಷದ ಸಮಾರಂಭ’ ಮತ್ತು ಮಾಧ್ಯಮ ಟ್ವೆಂಟಿ20 ಸ್ಮರಣಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು. ದೊಡ್ಡ ಮಟ್ಟದ ಪತ್ರಿಕೆಗಳು ಪತ್ರಕರ್ತರಿಗೆ ಅಂಕುಶ ಹಾಕಬಾರದು. ಅದರಿಂದ ವಸ್ತುನಿಷ್ಠ ವರದಿ ಹೊರಬರಲು ಸಾಧ್ಯವಾಗುತ್ತದೆ ಎಂದರು.
ಇತ್ತೀಚಿನ ದಿನಗಳಲ್ಲಿ ಸುದ್ದಿ ರೂಪದ ಜಾಹೀರಾತುಗಳು ಹೆಚ್ಚುತ್ತಿವೆ. ಅದರಿಂದ ಜನರು ಹೆಚ್ಚು ಪ್ರಭಾವಿತರಾಗುತ್ತಿದ್ದಾರೆ. ಅದನ್ನು ಕಡಿಮೆ ಮಾಡಬೇಕು. ಹಾಗೆಯೇ, ಸಣ್ಣಪತ್ರಿಕೆಗಳು ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪರಿಪೂರ್ಣ ಅಧ್ಯಯನ ಮುಖ್ಯ:ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಅರೆಬೆಂದ ಮಾಹಿತಿಯಿಂದ ಉಪದೇಶ ಮತ್ತು ಬರವಣಿಗೆ ಸರಿಯಲ್ಲ. ಸರಿಯಾಗಿ ಅಧ್ಯಯನ ಮಾಡಿ, ಪೂರ್ಣಪ್ರಮಾಣದ ಮಾಹಿತಿ ಪಡೆದು ವರದಿ ಮಾಡಿದರೆ ಪತ್ರಕರ್ತರು ಕೂಡ ಸಾಹಿತಿಗಳಾಗಿ ರೂಪುಗೊಳ್ಳುತ್ತಾರೆ ಎಂದರು. ಪತ್ರಕರ್ತನಾದವನು ಪ್ರತಿ ವಿಷಯವನ್ನು ಆಳವಾಗಿ ತಿಳಿದುಕೊಳ್ಳಬೇಕು. ಬರೆ ಯುವವರಿಗೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಅರಿವಿರ ಬೇಕು. ಹಾಗೆಯೇ, ಆತ್ಮವಿಮರ್ಶೆ ಮೂಲಕ ಎತ್ತರಕ್ಕೆ ಬೆಳೆಯಬೇಕು ಎಂದು ಸಲಹೆ ನೀಡಿದರು.
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಂಘದ ಅಧ್ಯಕ್ಷ ಎಂ.ಎಸ್. ರಾಜೇಂದ್ರಕುಮಾರ್, ಹಿರಿಯ ಪತ್ರಕರ್ತ ಚ.ಹ. ರಘುನಾಥ ಮತ್ತಿತರರಿದ್ದರು.
ಸಮಾಜದಲ್ಲಿ ಸಾಮರಸ್ಯ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಬಹಳ ಮುಖ್ಯವಾದದ್ದು. ಯಾವ ವಿಷಯಕ್ಕೆ ಪ್ರಾಶಸ್ತ್ರ ನೀಡಬೇಕು, ಯಾವುದನ್ನು ವೈಭವೀಕರಿಸಬೇಕು ಎಂಬುದರ ಬಗ್ಗೆ ಮಾಧ್ಯಮಗಳು ಚಿಂತನೆ ನಡೆಸಬೇಕು.
| ಶ್ರೀ ಸಿದ್ದಲಿಂಗ ಸ್ವಾಮೀಜಿಸಿದ್ದಗಂಗಾ ಮಠ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
