ಬೆಂಗಳೂರು:‘ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಅಪರಿಚಿತನೊಬ್ಬ ಬ್ಲ್ಯಾಕ್​ಮೇಲ್​ ಮಾಡಿದ್ದು, ಸುಮಾರು 30 ಸಾವಿರ ರೂಪಾಯಿ ವಸೂಲಿ ಕೂಡ ಮಾಡಿಕೊಂಡಿದ್ದಾನೆ. ಅಪರಿಚಿತ ವ್ಯಕ್ತಿಯ ಬೆದರಿಕೆ ಕರೆ ಕುರಿತು ಬಿಜೆಪಿ ಮುಖಂಡ ಪೊಲೀಸರಿಗೆ ದೂರು ನೀಡಿದ್ದಾರೆ.
ಬಿಜೆಪಿ ಮುಖಂಡ ಚಿ.ನಾ. ರಾಮು ಇಂಥದ್ದೊಂದು ಬೆದರಿಕೆ ಕರೆಗೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರದ ಸಾಮಾಜಿಕ ಸಬಲೀಕರಣ ಇಲಾಖೆ ಅಧೀನದ ಅಂಬೇಡ್ಕರ್ ಫೌಂಡೇಷನ್​ ನಿರ್ದೇಶಕ ಆಗಿರುವ ಚಿ.ನಾ.ರಾಮು ಈ ಕುರಿತು ಬೆಂಗಳೂರು ಸೆಂಟ್ರಲ್​ ಸಿಇಎನ್​ ಪೊಲೀಸರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ:‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..
ಫೇಸ್​​ಬುಕ್​ ಮೆಸೆಂಜರ್ ಮೂಲಕ ಚಿ.ನಾ.ರಾಮುಗೆ ಮಹಿಳೆಯೊಬ್ಬಳು ಪರಿಚಯಿಸಿಕೊಂಡಿದ್ದು, ನಂತರ ಅವರ ಮೊಬೈಲ್​ಫೋನ್​ ನಂಬರ್​ ಕೇಳಿ ಪಡೆದಿದ್ದಳು. ಆಮೇಲೆ ವಾಟ್ಸ್​ಆ್ಯಪ್​​ನಲ್ಲಿ ವಿಡಿಯೋ ಕಾಲ್ ಮಾಡಿದ್ದ ಆಕೆ ಅಸಭ್ಯವಾಗಿ ವರ್ತಿಸಿದ್ದಳು. ಇದಾದ ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ, ‘ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ. ಕೇಳಿದಷ್ಟು ಹಣ ನೀಡದಿದ್ದಲ್ಲಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡುತ್ತೇನೆ’ ಎಂದು ಬೆದರಿಕೆ ಹಾಕಿದ್ದ. ಆ ಬಳಿಕ ಅಪರಿಚಿತ ಸೂಚಿಸಿದ್ದ ಖಾತೆಗೆ 31,500 ರೂ. ಟ್ರಾನ್ಸ್​ಫರ್ ಮಾಡಿದ್ದ ಚಿ.ನಾ.ರಾಮು, ಬ್ಲ್ಯಾಕ್​ಮೇಲ್​ ಮಾಡುತ್ತಿರುವವರನ್ನು ಪತ್ತೆ ಮಾಡಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಟೇಬಲ್ ಮೇಲಿತ್ತು ಮೂರು ಟೀ ಕಪ್​; ದಂಪತಿಯನ್ನು ಪರಿಚಿತರೇ ಕೊಂದರಾ?

ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

ಪೂಜೆ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಪೂಜಾರಿ ಸಾವು; ನೋಡನೋಡುತ್ತಿದ್ದಂತೆ ನೂರಾರು ಅಡಿ ಆಳಕ್ಕೆ ಉರುಳಿದ ದೇಹ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − five =
Remember me
