|ಗಂಗಾಧರ್ ಬೈರಾಪಟ್ಟಣರಾಮನಗರ
ಕರೊನಾದಿಂದ ಶಾಲೆಗಳು ಬಂದ್ ಆಗಿರುವ ಪರಿಣಾಮ ಮಕ್ಕಳ ಭವಿಷ್ಯದ ಬಗ್ಗೆ ಪಾಲಕರು ಕಂಗಾಲಾಗಿರುವ ಸಂದರ್ಭದಲ್ಲೇ ಮಕ್ಕಳಿಗೆ ಮದ್ಯಪಾನ ಮಾಡಿಸಿ ಮತ್ತಿನಲ್ಲಿ ಅವರು ಆಡುವ ಆಟಗಳನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿರುವ ಪ್ರಕರಣ ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದೆ. ಬಾಳೆತೋಟವೊಂದರ ತೋಟದ ಮನೆ ಬಳಿ 10 ವರ್ಷದೊಳಗಿನ 7 ಮಕ್ಕಳಿಗೆ ಬಾಡೂಟದ ಜತೆ ಮದ್ಯ ನೀಡಿ ಕುಡಿಯುವಂತೆ ಉತ್ತೇಜಿಸುತ್ತಿರುವ ದೃಶ್ಯವನ್ನೊಳಗೊಂಡ ವಿಡಿಯೋ ಸೇರಿ 3 ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಮದ್ಯಪಾನ ಮಾಡಿದ ಬಳಿಕ ಮಕ್ಕಳು ಬೈದಾಡಿಕೊಳ್ಳುತ್ತಾರೆ. ಎಲ್ಲರನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸುವ ಬಾಲಕನೊಬ್ಬ ತನಗೆ ಮತ್ತಷ್ಟು ಎಣ್ಣೆ ಬೇಕು ಎಂದು ಕೂಗುವ ದೃಶ್ಯಗಳು ವಿಡಿಯೋಗಳಲ್ಲಿ ದಾಖಲಾಗಿದೆ. ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಬೇಕೆಂಬ ಆಗ್ರಹ ಕೇಳಿ ಬಂದಿದೆ.
ಸ್ಪಷ್ಟತೆ ಇಲ್ಲ:ಈ ವಿಡಿಯೋಗಳು ಯಾವಾಗ, ಎಲ್ಲಿ ರೆಕಾರ್ಡ್ ಆಗಿವೆ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ, ಸಾಮಾಜಿಕ ಜಾಲತಾಣದಲ್ಲಿರುವ ಮಾಹಿತಿ ಪ್ರಕಾರ ಇದು ಕನಕಪುರ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ.
ವಿಡಿಯೋಗಳನ್ನು ಪರಿಶೀಲಿಸಲಾಗುವುದು. ಸ್ಪಷ್ಟತೆ ದೊರೆತ ನಂತರ ಪ್ರಕರಣ ದಾಖಲಿಸುವ ಸಂಬಂಧ ಕ್ರಮವಹಿಸಲಾಗುವುದು.
|ಎಸ್.ಗಿರೀಶ್ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ರಾಮನಗರ
ಅಡುಗೆ ಮನೆವರೆಗೆ ಹಿಂಬಾಲಿಸಿಕೊಂಡು ಬಂದು ವೃದ್ಧೆಯ ಸರ ಎಗರಿಸಿದ ಕಳ್ಳ!

ಕೊಲೆ ಆರೋಪದ ಮೇಲೆ ಗ್ರಾಮ ಪಂಚಾಯತ್ ಅಧ್ಯಕ್ಷ ಪೊಲೀಸ್ ವಶಕ್ಕೆ!; ಕಾರು ಡಿಕ್ಕಿ ಹೊಡೆಸಿ ಕೊಲೆಗೈದ ಆರೋಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + eleven =
Remember me
