ಉಡುಪಿ:ನಗರದಲ್ಲಿ ಭಿಕ್ಷಾಟನೆ ಮಾಡಿಕೊಂಡು ಅಲೆಮಾರಿಯಂತೆ ತಿರುಗುತ್ತಿದ್ದ ಯುವಕ ಸಾಮಾಜಿಕ ಕಾರ್ಯಕರ್ತರ ನೆರವಿನಿಂದ ಮತ್ತೆ ಮನೆ ಸೇರುವಂತಾಗಿದೆ.
ಕುಂದಾಪುರ ತಾಲೂಕಿನ ವಕ್ವಾಡಿ ತೆಂಕಬೆಟ್ಟು ನಿವಾಸಿ ಪ್ರಶಾಂತ್ ಶೆಟ್ಟಿ (37) 25ನೇ ವಯಸ್ಸಿನಲ್ಲಿ ಮನೆಬಿಟ್ಟು ತೆರಳಿದ್ದು, ಕಾಸರಗೋಡು, ದ.ಕ.ಜಿಲ್ಲೆಯ ವಿವಿಧೆಡೆ ಕೂಲಿ ಹಾಗೂ ಹೋಟೆಲ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಕಳೆದ 3ವರ್ಷಗಳಿಂದ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರುವ ಯಾತ್ರಿಕರಲ್ಲಿ ಭಿಕ್ಷೆ ಯಾಚಿಸುತ್ತಾ ರಾತ್ರಿ ಸಮಯ ಬಸ್ಸು ನಿಲ್ದಾಣ, ಅಂಗಡಿ ಜಗುಲಿಯಲ್ಲಿ ಕಾಲ ಕಳೆಯುತ್ತಿದ್ದ. ಯುವಕನ ಮಾಹಿತಿ ಪಡೆದ ಜಿಲ್ಲಾ ನಾಗರಿಕ ಸಮಿತಿ ಸದಸ್ಯ ನಿತ್ಯಾನಂದ ಒಳಕಾಡು, ಭಿಕ್ಷಾಟನೆ ನಿಷೇಧ ಕಾಯ್ದೆ ಜಾರಿಯಲ್ಲಿದೆ, ಹೀಗಾಗಿ ಭಿಕ್ಷೆ ಬೇಡುವುದು ಅಪರಾಧ ಎಂದು ಕಿವಿಮಾತು ಹೇಳಿ ಮನವೊಲಿಸಿದರು. ಆದರೆ ಈತನಿಗೆ ಮನೆ ಕುಂದಾಪುರದಲ್ಲಿದೆ ಎಂಬುದು ಬಿಟ್ಟರೆ ವಿಳಾಸ ನೆನಪಿರಲಿಲ್ಲ. ಹೀಗಾಗಿ ಈತನ ಫೋಟೋವನ್ನು ಕುಂದಾಪುರದ ಸಾಮಾಜಿಕ ಕಾರ್ಯಕರ್ತರಿಗೆ ನೀಡಿ ಸಹಾಯ ಯಾಚಿಸಲಾಗಿತ್ತು. ವಕ್ವಾಡಿಯ ಸಾಮಾಜಿಕ ಕಾರ್ಯಕರ್ತೆ ಅಂಬಿಕಾ ಆತನನ್ನು ಗುರುತು ಹಿಡಿದು ತಾಯಿ ಬಳಿಗೆ ತಲುಪಿಸಲು ನೆರವಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − four =
Remember me
