ಬೆಂಗಳೂರು:ಮಗನೇ ತಂದೆಯ ಕೊಲೆ ಮಾಡಿದ ಭೀಕರ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು 60 ವರ್ಷದ ಬಸವರಾಜು ಎಂದು ಗುರುತಿಸಲಾಗಿದ್ದು ಕೊಲೆ ಮಾಡಿದ ವ್ಯಕ್ತಿ ಮೃತರ ಮಗ ನೀಲಾಧರ ಎನ್ನಲಾಗಿದೆ. ಈ ನೀಲಾಧರ, ತಾವು ವಾಸವಾಗಿದ್ದ ಶೆಡ್​ನಲ್ಲಿ ಇಟ್ಟಿಗೆಯಿಂದ ತನ್ನ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.
ಕೊಲೆಯಾಗಿ 15 ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಾಗ ಮಗನಿಂದಲೇ ಕೊಲೆಯಾಗಿರೋದು ಪತ್ತೆಯಾಗಿದೆ. ತನಿಖೆಯ ವೇಳೆ ಮದ್ಯಪಾನ ಮಾಡಲು ಹಣ ನೀಡಲಿಲ್ಲ ಎಂದು ತಂದೆಯನ್ನೇ ಮಗ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ.
ಈ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೇನಹಳ್ಳಿ ಪಿಎಸ್ ಲೇಔಟ್​ನಲ್ಲಿ ಈ ಘಟನೆ ನಡೆದಿದೆ. ಮೃತ ಬಸವರಾಜು ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರೆ ಮಗ ನೀಲಾಧರ ಆಟೋ ರಿಕ್ಷಾ ಚಾಲಕನಾಗಿದ್ದ. ಸದ್ಯ ಆರೋಪಿ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
