ತುಮಕೂರು:ಆಘಾತಕಾರಿ ಘಟನೆಯೊಂದರಲ್ಲಿ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಮಗ 11 ತಿಂಗಳ ಕಾಲ ಕೂಡಿ ಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ಗೇಟ್ ಸಾಡೆಪುರದಲ್ಲಿ ನಡೆದಿದೆ. ಸಿಡಿಪಿಒ ಆಗಿ ನಿವೃತ್ತರಾಗಿದ್ದ ಪಂಚಾಕ್ಷರಮ್ಮ (80) ಮಗನಿಂದ ದಿಗ್ಬಂಧನಕ್ಕೊಳಗಾದ ದುರ್ದೈವಿ ಎಂದು ತಿಳಿದು ಬಂದಿದೆ.
ಸಿಡಿಪಿಒ ಆಗಿ ನಿವೃತ್ತರಾಗಿರುವ ಪಂಚಾಕ್ಷರಮ್ಮ ಅವರ ಹೆಸರಿನಲ್ಲಿ 12 ಮನೆ ಇದ್ದು, ತಿಂಗಳಿಗೆ 50 ಸಾವಿರ ರೂ. ಪೆನ್ಷನ್ ಬರುತ್ತಿದೆ. ಈ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಬೇಕೆಂದು ಮಗ ಜೇಮ್ ಸುರೇಶ್ ಹಾಗೂ ಈತನ ಪತ್ನಿ ಆಶಾ ಕಿರುಕುಳ ನೀಡುತ್ತಿದ್ದು, ಕಳೆದ 11 ತಿಂಗಳಿನಿಂದ ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡುತ್ತಿದ್ದಾರೆ.
ತನ್ನ ತಾಯಿಗೆ ಬರುತ್ತಿದ್ದ 50 ಸಾವಿರ ರೂಪಾತಿ ನಿವೃತ್ತಿ ವೇತನವನ್ನು ನಾಲ್ವರು ಮಕ್ಕಳು ಬಳಸುತ್ತಿದ್ದರು. ಈಗಾಗಲೇ ತಾಯಿ ಬಳಿ ಇದ್ದ ಒಡವೆಗಳನ್ನು ಕೂಡ ಮಕ್ಕಳು ಪಡೆದಿದ್ದಾರೆ. ಸದ್ಯ ಮನೆಗಳನ್ನ ಮಕ್ಕಳ ಹೆಸರಿಗೆ ಮಾಡಿಕೊಡಲು ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಮನೆಗೆ ಬೀಗ ಹಾಕಿ ದಿಗ್ಬಂಧನ ಮಾಡಲಾಗಿತ್ತು.
ಇದನ್ನೂ ಓದಿ:ಕಾರ್​ ಶೋರೂಂನಲ್ಲಿ ಭಾರೀ ಅಗ್ನಿ ಅವಘಡ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮ
ವಿಚಾರ ತಿಳಿದ ಸ್ಥಳಿಯರು ಸಾಂತ್ವಾನ ಕೇಂದ್ರ ಸಖಿ ಕೇಂದ್ರ ಹಾಗೂ ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಅದರಂತೆ ವನಜಾಕ್ಷಿ ನಿವಾಸಕ್ಕೆ ಆಗಮಿಸಿದ ತುಮಕೂರು ‌ನಗರ ಪೊಲೀಸರು ಹಾಗೂ ಸಾಂತ್ವಾನ ಕೇಂದ್ರ ಅಧಿಕಾರಿಗಳು ವನಜಾಕ್ಷಿ ಅವರನ್ನು ರಕ್ಷಿಸಿ ಸಾಂತ್ವಾನ ಕೇಂದ್ರಕ್ಕೆ ಕರೆದುದೊಯ್ದಿದ್ದಾರೆ.
ಸಖಿ ಕೇಂದ್ರದಲ್ಲಿ ಎರಡು ದಿನ ಚಿಕಿತ್ಸೆ ನೀಡಲಾಗಿದ್ದು, ಬಳಿಕ ತಾಯಿಯನ್ನು ರಕ್ಷಣೆ ಮಾಡಿದ ಬಗ್ಗೆ ಅಧಿಕಾರಿಗಳು ಮಕ್ಕಳಿಗೆ ಮಾಹಿತಿ ನೀಡಿದ್ದಾರೆ. ಹೀಗಿದ್ದರೂ ಮಕ್ಕಳು ಬಾರದ ಹಿನ್ನೆಲೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೊರೆ ಹೀಗಿರುವ ಅಧಿಕಾರಿಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸರಿಗೆ ದೂರು ನೀಡಿದ್ದಾರೆ.
ಬಳಿಕ ನ್ಯಾಯಾಧೀಶರು ಹಾಗೂ ಸಾಂತ್ವಾನ ಕೇಂದ್ರದ ಸಿಬ್ಬಂದಿ ವೃದ್ದೆಯನ್ನ ಮನೆಗೆ ಕರೆದುಕೊಂಡು ಹೋಗಲಾಗಿದೆ. ತಾಯಿಯನ್ನ ಸರಿಯಾಗಿ ನೋಡಿಕೊಳ್ಳುವಂತೆ ನ್ಯಾಯಾಧೀಶರು ಎಚ್ಚರಿಕೆ ನೀಡಿದ್ದು, ಸರಿಯಾಗಿ ನೋಡಿಕೊಳ್ಳುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ. ಆ ಮೂಲಕ ಪ್ರಕರಣ ಇತ್ಯರ್ಥಗೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + three =
Remember me
