ಚಿಕ್ಕಬಳ್ಳಾಪುರ:ಪೊಲೀಸೊಬ್ಬರ ಮನೆ ಮೇಲೆಯೇ ಕಳ್ಳರು ದಾಳಿ ಮಾಡಿದ್ದು, ಅಡ್ಡ ಬಂದ ಎಎಸ್​​ಐ ಹಾಗೂ ಅವರ ಪುತ್ರನತ್ತ ಶೂಟ್ ಮಾಡಿದ್ದು, ಎಎಸ್​​ಐ ಪುತ್ರ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕು ಪೇರೇಸಂದ್ರ ಗ್ರಾಮದಲ್ಲಿ ಎಎಸ್​​ಐ ನಾರಾಯಣಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ. ಇವರು ಬಾಗೇಪಲ್ಲಿ ಠಾಣೆಯಲ್ಲಿ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮನೆಗೆ ನುಗ್ಗಿದ್ದ ಕಳ್ಳರು, ಮನೆಯಲ್ಲಿದ್ದ ಎಎಸ್ಐ ಪತ್ನಿ ಹಾಗೂ ಸೊಸೆಗೆ ಬೆದರಿಸಿ ಮಾಂಗಲ್ಯ ಸರ ದೋಚಿದ್ದಾರೆ. ಅಲ್ಲದೆ ನಗದು-ಚಿನ್ನಾಭರಣ ಸುಲಿಗೆ ಮಾಡಿಕೊಂಡು ಪರಾರಿಯಾಗಲು ಮುಂದಾಗಿದ್ದರು.
ಅದೇ ಸಮಯಕ್ಕೆ ಹೊರಗಡೆಯಿಂದ ಎಎಸ್​​ಐ ಹಾಗೂ ಪುತ್ರ ಮನೆಗೆ ಬಂದಿದ್ದು, ಕಳ್ಳರನ್ನು ತಡೆದು ಹಿಡಿಯಲು ಯತ್ನಿಸಿದ್ದರು. ಆಗ ಇವರತ್ತ ಕಳ್ಳರು ಗುಂಡು ಹಾರಿಸಿದ್ದಾರೆ. ಪರಿಣಾಮವಾಗಿ ನಾರಾಯಣಸ್ವಾಮಿ ಅವರ ಪುತ್ರ ಶರತ್​ಗೆ ಗುಂಡೇಟು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೇರೇಸಂದ್ರ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ ಹೃದಯಾಘಾತಕ್ಕೀಡಾಗಿ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eight =
Remember me
