ವಿಜಯನಗರ:ವಿಜಯದಶಮಿಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಎಲ್ಲ ಸಂಭ್ರಮವೂ ಅಪಘಾತವೊಂದಕ್ಕೆ ಬಲಿಯಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ.
ಐದು ದಿನಗಳ ಹಿಂದೆ ಹೊಸಪೇಟೆಯಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ಯುವಕರಿಗೆ ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತವೊಂದು ನಡೆದಿತ್ತು. ಈ ಅಪಘಾತದಲ್ಲಿ ಪವನ್ ಎಂಬಾತ ಸ್ಥಳದಲ್ಲೇ ಸಾವಿಗೀಡಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ನೀಲಕಂಠನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಕೆಲದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ನೀಲಕಂಠ ಇಂದು ಸಾವಿಗೀಡಾಗಿದ್ದಾನೆ. ಹಬ್ಬದ ದಿನವೇ ಮನೆಗೆ ಶವ ತರುವಂತಾಗಿದ್ದು, ಮನೆಯವರ ಆಕ್ರಂದನ ಮುಗಿಲು ಮುಟ್ಟಿತ್ತು. ಪವನ್ ಬಿಕಾಂ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ, ನೀಲಕಂಠ ಐಟಿಐ ವಿದ್ಯಾರ್ಥಿಯಾಗಿದ್ದ. ಹೊಸಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ
ನೀವು ಈ ಆ್ಯಪ್​ ಬಳಸುತ್ತಿದ್ದೀರಾ?; ಹಾಗಿದ್ದರೆ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ, ಎಚ್ಚರಿಕೆ..​
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:six + 2 =
Remember me
