ಬೆಂಗಳೂರು:ತಾಯಿಯೊಂದಿಗೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದವ ಹತ್ತು ದಿನಗಳ ಬಳಿಕ ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಪ್ರದೀಪ್ (35) ಸಾವಿಗೀಡಾದ ವ್ಯಕ್ತಿ. ಹಲವು ವರ್ಷಗಳಿಂದ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ಈತ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ. ಕ್ಯಾಟರಿಂಗ್ ಕಂಟ್ರಾಕ್ಟ್ ಕೆಲಸದಲ್ಲಿದ್ದ ಈತ ಮದ್ಯಪಾನ ಮಾಡಿ ತಾಯಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.
ಹತ್ತು ದಿನಗಳ ಹಿಂದೆ ಹೀಗೆ ತಾಯಿಯೊಂದಿಗೆ ಜಗಳವಾಡಿದ್ದ ಈತ ಬಳಿಕ ಮನೆ ಬಿಟ್ಟು ಹೋಗಿದ್ದ. ಅಂದಿನಿಂದ ಈತನ ಸುಳಿವು ಇರಲಿಲ್ಲ. ಆದರೆ ಇಂದು ಈತನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೂರು ದಿನಗಳ ಹಿಂದೆ ಸಾವು ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದೆ. ಘಟನಾ ಸ್ಥಳಕ್ಕೆ ಗೋವಿಂದರಾಜನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊಡಗಲ್ಲಿ 2018ರಲ್ಲಿ ಭೂಕುಸಿತವಾಗಿದ್ದ ಪ್ರದೇಶದಲ್ಲೇ ಮತ್ತೆ ಭೂಕುಸಿತ-ಜಲಸ್ಫೋಟ; 18 ಮನೆಯವರ ತೆರವು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + fifteen =
Remember me
