ಮಂಗಳೂರು:ರಾಷ್ಟ್ರ ಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು ಇಂದು (ಜೂ.16) ಪ್ರಕಟವಾಗಿದೆ. ಆರೋಪಿ ಸಂತೋಷ್ ರಾವ್ ದೋಷ ಮುಕ್ತ ಎಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಘಟನೆ ನಡೆದ ಹನ್ನೊಂದು ವರ್ಷಗಳ ಬಳಿಕ ಇಂದು ತೀರ್ಪು ಹೊರಬಿದ್ದಿದೆ. ಪ್ರಕರಣ ಸಂಬಂಧ ಸಾಕ್ಷ್ಯಾಧಾರ ಕೊರತೆಯಿಂದಾಗಿ ಆರೋಪಿ ಸಂತೋಷ್​ ರಾವ್​ನನ್ನು ಬಿಡುಗಡೆ ಮಾಡಿ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಸಿ.ಬಿ. ಅವರು ಆದೇಶ ಹೊರಡಿಸಿದರು.
ಇದನ್ನೂ ಓದಿ:ಕೊತಕೊತ ಕುದಿಯುವ ಬಿಸಿ ಎಣ್ಣೆಯನ್ನು ಪತಿಯ ಖಾಸಗಿ ಅಂಗದ ಮೇಲೆ ಎರಚಿದ ಪತ್ನಿ!
ಮೃತ ಸೌಜನ್ಯ ಉಜಿರೆಯ ಎಸ್​ಡಿಎಂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಆಕೆಯನ್ನು 2012ರ ಅಕ್ಟೋಬರ್ 10 ರಂದು ಅತ್ಯಾಚಾರ ನಡೆಸಿ ಕೊಲೆಗೈಯಲಾಗಿತ್ತು. ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಕಾಡಿನಲ್ಲಿ ಈ ಕೃತ್ಯ ನಡೆದಿತ್ತು. ಈ ಘಟನೆ ರಾಷ್ಟ್ರದಾದ್ಯಂತ ಭಾರೀ ಸುದ್ದಿಯಾಗಿ ಜನಾಕ್ರೋಶ ವ್ಯಕ್ತವಾಗಿತ್ತು.
ಘಟನೆ ಬಳಿಕ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಸಂತೋಷ್ ರಾವ್​ನನ್ನು ಬಂಧಿಸಿದ್ದರು. ಮಾನಸಿಕ ಸ್ಥಿಮಿತ ಕಳೆದುಕೊಂಡು ಕೃತ್ಯ ನಡೆಸಿದ್ದ ಎನ್ನಲಾಗಿತ್ತು. ಆರೋಪಿಯು ಜಾಮೀನುನಲ್ಲಿ ಬಿಡುಗಡೆಗೊಂಡಿದ್ದ. ಹಲವು ಹೋರಾಟದ ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಇದೀಗ ಸಿಬಿಐ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿ ಸಂತೋಷ್ ರಾವ್ ದೋಷ ಮುಕ್ತ ಎಂದು ಹೇಳಿದೆ.(ದಿಗ್ವಿಜಯ ನ್ಯೂಸ್​)
ಗಾಢ ನಿದ್ರೆಯಲ್ಲಿದ್ದ ಪೋಷಕರು, 8ನೇ ಮಹಡಿಯಿಂದ ಬಿದ್ದು ಮಗು ಸಾವು

ಆದಿಪುರುಷ್​ ಚಿತ್ರ ಚೆನ್ನಾಗಿಲ್ಲ ಎಂದಿದ್ದಕ್ಕೆ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಪ್ರಭಾಸ್​ ಫ್ಯಾನ್ಸ್​

29 ವರ್ಷದ ಗೆಳತಿಯ ಮಗುವಿಗೆ ತಂದೆಯಾದ 83ರ ಹಾಲಿವುಡ್​​ ನಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
