ಬೆಂಗಳೂರು: ವಂದೇ ಭಾರತ್ ಪ್ರಯಾಣ ದರ ಪರಿಷ್ಕರಣೆ ಬಗ್ಗೆ ಚಿಂತನೆ ನಡೆದಿಲ್ಲ. ಎಲ್ಲ ವರ್ಗದ ಜನರಿಗೆ ರೈಲ್ವೆ ಪ್ರಯಾಣವನ್ನು ಅನುಕೂಲವಾಗಿಸುವ ಹಿನ್ನೆಲೆಯಲ್ಲಿ ಇತರೆ ರೈಲುಗಳಿಗೆ ಹೆಚ್ಚುವರಿ ಜನರಲ್ ಕೋಚ್​ಗಳನ್ನು ಅಳವಡಿಸುವ ಚಿಂತನೆಯಿದೆ ಎಂದು ನೈಋತ್ಯ ರೈಲ್ವೆ ಗೊಂದಲಗಳಿಗೆ ಸ್ಪಷ್ಟನೆ ನೀಡಿದೆ.
ವಂದೇ ಭಾರತ್​ ಸೇರಿ ಇತರೆ ರೈಲುಗಳ ಪ್ರಯಾಣ ದರ ಪರಿಷ್ಕರಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಶನಿವಾರ ನಗರದ ಖಾಸಗಿ ಹೋಟೆಲ್​ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದ್ದರು. ರೈತರು, ಮಧ್ಯಮವರ್ಗದ ಜನರು ಹಾಗೂ ಆರ್ಥಿಕವಾಗಿ ಹಿಂದುಳಿದವರನ್ನು ಗಮನದಲ್ಲಿಟ್ಟುಕೊಂಡು ರೈಲುಗಳ ದರವನ್ನು ಪರಿಷ್ಕರಣೆ ಮಾಡಬೇಕಿದೆ. ಬಡವರಿಗೂ ಒಂದೇ ಭಾರತ್​ ರೈಲುಗಳಲ್ಲಿ ಸಂಚರಿಸಬೇಕು ಎನ್ನುವ ಆಸೆ ಇರುತ್ತದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ್ದರು.
ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್​ನ ದರ ಹೆಚ್ಚಿದ್ದು ಸಾಮಾನ್ಯ ಜನರಿಗೆ ಅನುಕೂಲವಾಗುವ ರೈಲುಗಳನ್ನು ಓಡಿಸಬೇಕು ಎಂದು ಮಾಧ್ಯಮದವರೊಬ್ಬರು ತಿಳಿಸಿದಾಗ, ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ, ಕರ್ನಾಟಕದ ಹಳ್ಳಿ-ಹಳ್ಳಿಗೂ ರೈಲ್ವೆ ಸಂಪರ್ಕ ವೃದ್ಧಿಸಿ, ಬಡವರ ಹಾಗೂ ಜನಸಾಮಾನ್ಯರ ಕೈಗೆಟುಕುವ ದರದಲ್ಲಿ ರೈಲ್ವೆ ಪ್ರಯಾಣ ಸೌಲಭ್ಯ ಕಲ್ಪಿಸುವ ದೃಷ್ಟಿಯಲ್ಲಿ ಸಚಿವರು ಮಾತನಾಡಿದ್ದಾರೆ. ಇತರೆ ರೈಲುಗಳಿಗೆ ಹೆಚ್ಚುವರಿ ಜನರಲ್ ಕೋಚ್​ಗಳನ್ನು ಅಳವಡಿಸುವ ಮೂಲಕ ಸಾಮಾನ್ಯ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ಚಿಂತನೆಯಿದೆ ಎಂದು ನೈಋತ್ಯ ರೈಲ್ವೆ ಸ್ಪಷ್ಟನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 3 =
Remember me
