ಚಿತ್ರದುರ್ಗ:ಆಗ್ನೇಯ ಪದವೀಧರ ಕ್ಷೇತ್ರದ ಚುಣಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಬಿಜೆಪಿ ಹಿಂದುಳಿದ ಮೋರ್ಚಾ ಉಪಾದ್ಯಕ್ಷರಾಗಿದ್ದ ಡಿ.ಟಿ.ಶ್ರೀನಿವಾಸ್, ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾರ ಪತಿ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದ ಶ್ರೀನಿವಾಸ್​ಗೆ ಟಿಕೆಟ್​ ಕೈ ತಪ್ಪಿತ್ತು. ಹಾಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದರೂ ಶ್ರೀನಿವಾಸ್​ ಮಾತ್ರ ನಿರ್ಧಾರ ಬದಲಿಸಲಿಲ್ಲ.
ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹೊಂದಿ ಪಕ್ಷ ವಿರೋಧಿ ಚಟುವಟಿಕೆ ನಡೆಸಲಾಗಿದೆ ಎಂದು ಪಕ್ಷದಿಂದಲೇ ಶ್ರೀನಿವಾಸ್​ರನ್ನು ಉಚ್ಛಾಟಿಸಲಾಗಿದೆ. ಅವರ ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಕರೊನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ! ನೇರ ಸಂಪರ್ಕದಿಂದಲೇ ಈ ರೋಗ ಹರಡುತ್ತೆ

ಗ್ರಾಪಂ ಚುನಾವಣೆಗೆ ಇದ್ದ ಅಡ್ಡಿಯನ್ನು ದೂರ ಸರಿಸಿದ ಹೈಕೋರ್ಟ್​! ಸರ್ಕಾರಕ್ಕೂ ತರಾಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 14 =
Remember me
