ಬೆಂಗಳೂರು:ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು, ರೈತರ ಅಹವಾಲು ಆಲಿಕೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಕೆಲವು ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಲಿದ್ದಾರೆ.
ಚಿತ್ರದುರ್ಗ, ದಾವಣಗೆರೆ, ಹಾವೇರಿ ಮತ್ತಿತರ ಸಮಸ್ಯಾತ್ಮಕ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದಾರೆ. ಈ ವಾರದಲ್ಲೇ ಭೇಟಿ ನೀಡುವ ಉದ್ದೇಶ ಹೊಂದಿದ್ದಾರೆ. ಆದರೆ, ಪ್ರವಾಸದ ವೇಳಾಪಟ್ಟಿ ಇನ್ನು ಸಿದ್ಧವಾಗಿಲ್ಲ.
ಬಿತ್ತನೆ ಬೀಜ, ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದ್ದರೂ ರೈತರು ಪದೇ ಪದೆ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಇನ್ನು ಕೆಲವೆಡೆ ಬಿತ್ತನೆ ಬೀಜದ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಯುತ್ತಿವೆ. ಈ ಎಲ್ಲ ಸಮಸ್ಯೆ ಪರಿಹರಿಸುವ ದೃಷ್ಟಿಯಿಂದ ಚಲುವರಾಯಸ್ವಾಮಿ ಮೊದಲ ಹಂತದಲ್ಲಿ ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ದಾವಣಗೆರೆಯಲ್ಲಿ ಬಿತ್ತನೆ ಬೀಜ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಗಿತ್ತು. ಬಳ್ಳಾರಿಯಲ್ಲಿ ತೊಗರಿ ಬಿತ್ತನೆ ಬೀಜಕ್ಕೆ ರೈತರು ಮುಗಿ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಕೃಷಿ ಸಚಿವರ ಜಿಲ್ಲಾ ಪ್ರವಾಸ ಮಹತ್ವ ಪಡೆದುಕೊಂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 2 =
Remember me
