ಬೆಂಗಳೂರು:ರಾಜ್ಯದಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ 40 ಲಕ್ಷ ಹೆಕ್ಟೇರ್​ ಪ್ರದೇಶಗಳಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಈ ಬಾರಿ 82.48 ಲಕ್ಷ ಹೆಕ್ಟೇರ್​ ಪ್ರದೇಶಗಳಲ್ಲಿ ಬಿತ್ತನೆ ಗುರಿ ಪೈಕಿ 40 ಲಕ್ಷ ಹೆಕ್ಟೇರ್​ ಪ್ರದೇಶಗಳಲ್ಲಿ ಈಗಾಗಲೇ ಬಿತ್ತನೆ ಕಾರ್ಯವಾಗಿದೆ. 23.99 ಲಕ್ಷ ಹೆಕ್ಟೇರ್​ ನೀರಾವರಿ ಪ್ರದೇಶಗಳ ಪೈಕಿ 7.94 ಲಕ್ಷ ಹೆಕ್ಟೇರ್​ಗಳಲ್ಲಿ ಏಕಧಾನ್ಯ, ದ್ವಿದಳ ಧಾನ್ಯ, ಎಣ್ಣೆ ಕಾಳುಗಳು, ವಾಣಿಜ್ಯ ಬೆಳೆಗಳನ್ನು ಬಿತ್ತನೆ ಮಾಡಲಾಗಿದೆ. 58.49 ಲಕ್ಷ ಹೆಕ್ಟೇರ್​ ಪ್ರದೇಶಗಳು ಮಳೆ ಅವಲಂಬಿಸಿದ್ದು, ಈವರೆಗೆ 30 ಲಕ್ಷ ಹೆಕ್ಟೇರ್​ ಪ್ರದೇಶಗಳಲ್ಲಿ ಭತ್ತ, ಜೋಳ, ರಾಗಿ, ಮೆಕ್ಕೆಜೋಳ, ಗೋಧಿ, ತೊಗರಿ, ಕಡಲೆ, ಹುರುಳಿ, ಉದ್ದು, ಹೆಸರು, ಅಲಸಂದೆ, ಅವರೆ, ಮಟಕಿ, ಶೇಂಗಾ, ಎಳ್ಳು, ಸೂರ್ಯಕಾಂತಿ, ಹರಳಿ, ಹಿಚ್ಚೆಳ್ಳು, ಸೋಯಾ ಅವರೆ, ಅಗಸೆ, ಹತ್ತಿ, ಕಬ್ಬು ಮತ್ತು ತಂಬಾಕು ಸೇರಿ ವಿವಿಧ ಬೀಜಗಳನ್ನು ಬಿತ್ತನೆ ಮಾಡಲಾಗಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸಾಗಿವೆ. ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಉಡುಪಿ, ದಣ ಕನ್ನಡ, ಉತ್ತರ ಕನ್ನಡದಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ವರ್ಷಧಾರೆಯಾಗಿದ್ದರೂ ಬಿತ್ತನೆ ಬೀಜ ಬಿತ್ತಲಾಗಿದೆ.ಆದರೆ, ಕೆಲ ಪ್ರದೇಶಗಳಲ್ಲಿ ಬಿತ್ತನೆ ಮಾಡಿದ ಬಳಿಕ ವಾರ ಕಾಲ ಮಳೆ ಕುಂಠಿತವಾಗಿತ್ತು. ಇದರಿಂದಾಗಿ ರೈತರಿಗೆ ಬೆಳೆಗಳು ಒಣಗುವ ಆತಂಕ ಕಾಡುತ್ತಿತ್ತು. ಕಳೆದ ಒಂದು ವಾರದಿಂದ ಮುಂಗಾರು ಪ್ರಬಲವಾಗಿದ್ದು, ಉತ್ತಮ ಮಳೆ ಸುರಿಯುತ್ತಿದೆ.ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ರೈತರು ತಮ್ಮ ಜಮೀನು ಹದಗೊಳಿಸಿ ಬಿತ್ತನೆ ಬೀಜ ಬಿತ್ತಲು ಸಿದ್ಧತೆ ಮಾಡಿಕೊಂಡಿದ್ದರು. ಜೂ 2ರಂದು ಪ್ರವೇಶಿಸಿದ್ದ ಮುಂಗಾರು ಉತ್ತಮವಾಗಿ ಆರಂಭವಾಯಿತು. ಈ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಮಾಡಿದರು. ಬೆಂ. ಗ್ರಾಮಾಂತರ, ದಣ ಕನ್ನಡ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಕಡಿಮೆ ಪ್ರಮಾಣದಲ್ಲಿ ಬಿತ್ತನೆ ಕಾರ್ಯ ನಡೆದಿದೆ.
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ಕೊರತೆ
ವಾಡಿಕೆಯಷ್ಟು ಮಳೆ:ಜೂನಲ್ಲಿ ರಾಜ್ಯಾದ್ಯಂತ 208 ಮಿಮೀ ಮಳೆ ಬೀಳಬೇಕಿತ್ತು. 205 ಮಿಮೀ ಬಿದ್ದಿದ್ದು, ವಾಡಿಕೆಗಿಂತ ಶೇ.2ರಷ್ಟು ಕಡಿಮೆ ಪ್ರಮಾಣದಲ್ಲಿ ಸುರಿದಿದೆ. ಆದರೆ, ರಾಜ್ಯಾದ್ಯಂತ ಒಟ್ಟಾರೆ ವಾಡಿಕೆಯಷ್ಟೇ ಮಳೆಯಾದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ವರದಾನವಾಗಿದೆ. ಐದು ವರ್ಷಗಳಿಂದ ಮಳೆ ಅವಧಿ ದಿನಗಳು ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್​ನಲ್ಲಿ ಮಳೆ ಕುಂಠಿತವಾಗುತ್ತಿತ್ತು. ಇದರಿಂದಾಗಿ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಜತೆಗೆ ಆಹಾರ ಉತ್ಪಾದನೆಯಲ್ಲಿ ಇಳಿಕೆಯಾಗಿತ್ತು. ಈ ಬಾರಿ “ಎಲ್​ ನಿನೋ’ ದುರ್ಬಲವಾಗಿ ಲಾ&ನಿನಾ’ ಉಂಟಾಗಿರುವ ಹಿನ್ನೆಲೆಯಲಿ ಮುಂಗಾರು ಆಶಾದಾಯಕವಾಗಿದ್ದು, ಜೂನ್​ನಲ್ಲಿ ವಾಡಿಕೆಯಷ್ಟೂ ಮಳೆ ಸುರಿದಿದೆ. ಅಲ್ಲದೆ, ಜೂನ್​ನಿಂದ ಸೆಪ್ಟೆಂಬರ್​ವರೆಗೆ ರಾಜ್ಯದಲ್ಲಿ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚು ಬೀಳುವ ಸಾಧ್ಯತೆ ಇದೆ.
34 ತಾಲೂಕುಗಳಲ್ಲಿ ಮಳೆ ಕೊರತೆ:ಜೂ 1ರಿಂದ ಜು.2ರವರೆಗೆ 77 ತಾಲೂಕುಗಳಲ್ಲಿ ವಾಡಿಕೆಗಿಂತ ಅಧಿಕ ಪ್ರಮಾಣದಲ್ಲಿ ಮಳೆ ಸುರಿದರೆ, 54 ತಾಲೂಕುಗಳಲ್ಲಿ ವಾಡಿಕೆಗಿಂತ ತುಸು ಹೆಚ್ಚು ಸುರಿದಿದೆ. 71 ತಾಲೂಕುಗಳಲ್ಲಿ ವಾಡಿಕೆಯಷ್ಟೇ ವರ್ಷಧಾರೆಯಾದರೆ, 34 ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಬಿದ್ದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
