ಬೆಂಗಳೂರು:ಕಾಂಗ್ರೆಸ್​ ಅಭ್ಯರ್ಥಿಯಾಗಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಸೋಮವಾರ (ಏಪ್ರಿಲ್​ 01) ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್​ ರೋಡ್​ ಶೋ ನಡೆಸಿದ ಸೌಮ್ಯ ರೆಡ್ಡಿಗೆ ಡಿಸಿಎಂ ಡಿ.ಕೆ. ಶಿವಕುಮಾರ್​, ಸಚಿವ ರಾಮಲಿಂಗಾ ರೆಡ್ಡಿ, ಶಾಸಕರಾದ ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಅನೇಕ ನಾಯಕರು ಸಾಥ್​ ನೀಡಿದ್ದರು.
ಹಾಲಿ ಸಂಸದ ತೇಜಸ್ವಿ ಸೂರ್ಯರನ್ನು ಸೋಲಿಸಿ ಸಂಸತ್​ ಪ್ರವೇಶಿಸುವ ಆಸೆಯನ್ನು ಹೊಂದಿರುವ ಸೌಮ್ಯ ರೆಡ್ಡಿ ತಮ್ಮ ಆಸ್ತಿ ವಿವರವನ್ನೂ ಘೋಷಣೆ ಮಾಡಿದ್ದಾರೆ. ಇವರ ಸ್ಥಿರಾಸ್ತಿ ಹಾಗೂ ಚರಾಸ್ತಿ ಸೇರಿ ಒಟ್ಟು 2.13 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದು ತಂದೆ ಬಳಿಯೇ ಸಾಲ ಮಾಡಿರುವುದಾಗಿ ತಮ್ಮ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:ಐಪಿಎಲ್​ ಟೂರ್ನಿ ನಡುವೆಯೇ ಫ್ರಾಂಚೈಸಿ ಮಾಲೀಕರ ಸಭೆ ಕರೆದ ಬಿಸಿಸಿಐ
ಜಯನಗರದ ಮಾಜಿ ಶಾಸಕಿಯೂ ಆಗಿರುವ ಸೌಮ್ಯಾ ರೆಡ್ಡಿ ಅವರು 89.27 ಲಕ್ಷ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಇನ್ನು 1.24 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಬಳಿ 44,135 ರೂ. ನಗದು ಇದೆ. ಬ್ಯಾಂಕ್‌ ಖಾತೆಯಲ್ಲಿ 40,96,252 ರೂ. ಇದೆ. 19,85,358 ರೂಪಾಯಿ ಬೆಲೆ ಬಾಳುವ ಒಂದು ಇನ್ನೋವಾ ಕಾರು ಕೂಡ ಇದೆ. 950 ಗ್ರಾಂ ಚಿನ್ನ, 5 ಕೆಜಿ ಬೆಳ್ಳಿ ಸೇರಿ ಒಟ್ಟು 28 ಲಕ್ಷ ರೂ. ಮೌಲ್ಯದ ಆಭರಣಗಳಿವೆ. ಬೇಗೂರು ಬಳಿ 1.24 ಕೋಟಿ ರೂ. ಮೌಲ್ಯದ ಫ್ಲ್ಯಾಟ್‌ ಇದೆ ಎಂಬುದಾಗಿ ಅವರು ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ.
ಸೌಮ್ಯಾ ರೆಡ್ಡಿ ಅವರು ಒಟ್ಟು 1.5 ಕೋಟಿ ರೂ. ಸಾಲ ಮಾಡಿದ್ದಾರೆ. ಇವರು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 79 ಲಕ್ಷ ರೂ. ಸಾಲ ಮಾಡಿದ್ದಾರೆ. ಅಷ್ಟೇ ಅಲ್ಲ, ತಂದೆ ರಾಮಲಿಂಗಾ ರೆಡ್ಡಿ ಅವರ ಬಳಿಯೇ ಸೌಮ್ಯಾ ರೆಡ್ಡಿ ಅವರು 56 ಲಕ್ಷ ರೂ. ಸಾಲ ಪಡೆದುಕೊಂಡಿದ್ದಾರೆ. ಸಹೋದರ ಶ್ರೀರಾಜ್‌ ಬಳಿಯೂ ಸೌಮ್ಯಾ ರೆಡ್ಡಿ ಅವರು 9.75 ಲಕ್ಷ ರೂ. ಸಾಲ ಮಾಡಿರುವುದಾಗಿ ತಮ್ಮ ನಾಮಪತ್ರದಲ್ಲಿ ಉಲ್ಲೇಖಿಸದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 10 =
Remember me
