ಬೆಂಗಳೂರು:ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024 ಸಂಬಂಧ ವಿಶೇಷ ಅಭಿಯಾನಗಳನ್ನು ಆಯೋಜಿಸುವಂತೆ ಆಯಾ ಜಿಲ್ಲಾಡಳಿತ ಮತ್ತು ಬಿಬಿಎಂಪಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ ನೀಡಿದೆ.ಯಾವದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಎಂಬ ದ್ವೇಯದೊಂದಿಗೆ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಆಯೋಗದ ಆದೇಶದಲ್ಲಿ ತಿಳಿಸಲಾಗಿದೆ.ಪ್ರತಿದಿನ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳುಎಲ್ಲಾ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಅಧಿಕೃತ ಸಾಮಾಜಿಕ ಜಾಲ ತಾಣಗಳಲ್ಲಿ ಮತದಾರರ ಪಟ್ಟಿಯ ವಿಶೇಷ, ಸಂಕ್ಷಿಪ್ತ ಪರಿಷ್ಕರಣೆ-2024 ಬಗ್ಗೆ ಮಾಹಿತಿ ಹಂಚಿಕೊಳ್ಳಬೇಕು ಹಾಗೂ ತಮ್ಮ ಟ್ವಿಟ್ಟರ್ ಖಾತೆಗಳಲ್ಲಿ ಈ ಬಗ್ಗೆ ಕನಿಷ್ಟ ಎರಡು ಅಂಶಗಳನ್ನು ವಿನಿಮಯ ಮಾಡುವಂತೆ ಎಂದು ತಿಳಿಸಲಾಗಿದೆ.ಪೋಸ್ಟರ್ ಬ್ಯಾನರ್, ಹೋರ್ಡಿಂಗ್ಸ್, ಡಿಜಿಟಲ್ ಮೀಡಿಯಾ ಇತ್ಯಾದಿಗಳನ್ನು ಬಳಕೆ ಮಾಡಿಕೊಂಡುತಮ್ಮ ಇಲಾಖೆಗಳ ಮುಂಭಾಗದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸುವಂತಿಯೂ ತಿಳಿಸಲಾಗಿದೆ.ರೇಡಿಯೋ ಜಿಂಗಲ್ಸ್‌ಗಳನ್ನು, ವಿಡಿಯೋಗಳನ್ನು ಮತ್ತು ಇತರೆ ಖ್ಖಉಉ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಪ್ರೇರೇಪಿಸುವಂತೆ ತಮ್ಮ ಜಿಲ್ಲಾ ವ್ಯಾಪ್ತಿಯ ಆಧೀನ ಕಚೇರಿಗಳೊಂದಿಗೆ ಸಮನ್ವಯ ಸಾಧಿಸಿ, ಸೂಕ್ತ ನಿರ್ದೇಶನಗಳನ್ನು ನೀಡುವಂತೆಯೂ ತಿಳಿಸಲಾಗಿದೆ.ಅತ್ಯುತ್ತಮ ಗುಣಮಟ್ಟದ ಛಾಯಾಚಿತ್ರಗಳನ್ನು ತಮ್ಮ ಅಧಿಕೃತ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವಂತೆ ಮತ್ತು ಅತ್ಯುತ್ತಮ ಗುಣಮಟ್ಟದ ಛಾಯಾಚಿತ್ರಗಳನ್ನು ಶೀರ್ಷಿಕೆಯೊಂದಿಗೆ ವಿವರವಾದ ಮಾಹಿತಿಯನ್ನು ್ಚಟ್ಞಛಿಛಿಃಞಜ್ಝಿ.್ಚಟಞ ಗೆ ಕಳುಹಿಸಲು ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eleven =
Remember me
