ಬೆಂಗಳೂರು:ಅಡಳಿತ ಸುಧಾರಣಾ ಆಯೋಗ ಕಂದಾಯ ಇಲಾಖೆಯಲ್ಲಿ ದಕ್ಷತೆಯನ್ನು ಹೆಚ್ಚಿಸುವ ಸಂಬಂಧ ನೀಡಿರುವ ಶಿಫಾರಸ್ಸು ಆಳವಡಿಸಿಕೊಳ್ಳಲು ವಿಶೇಷ ಸಲಹಾ ಸಮಿತಿ ರಚಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚನೆ ಮಾಡಲಾಗಿದೆ.
ಕಂದಾಯ ಇಲಾಖೆಯ ವರ್ಗಾವಣೆ, ಸ್ಥಳನಿಯುಕ್ತಿ, ತರಬೇತಿ, ಜೇಷ್ಠತಾ ಪಟ್ಟಿ, ಅಧಿಕಾರಿಗಳು ನಿರ್ವಹಿಸಬೇಕಾಗಿರುವ ಕರ್ತವ್ಯ ಮತ್ತು ಜವಾಬ್ದಾರಿಗಳು, ಆಡಳಿತ ಶ್ರೇಣಿ ವ್ಯವಸ್ಥೆ ಕಾರ್ಯಕ್ಷಮತೆಯ ವಿಶ್ಲೇಷಣೆ, ಪುರಸ್ಕಾರ ಕಾರ್ಯವಿಧಾನಗಳ ಬಗ್ಗೆ, ಯಾವುದೇ ಸ್ಪಷ್ಟತೆ ಇಲ್ಲದೇ ಇರುವುದನ್ನು ಗಮನಿಸಲಾಗಿದೆ. ಈ ವಿಷಯಗಳ ಬಗ್ಗೆ ಸಲಹೆ-ಸೂಚನೆ ನೀಡಲು ಮತ್ತು ಈ ಶಿಫಾರಸ್ಸುಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಸಮಿತಿ ಮಾರ್ಗದರ್ಶನ ನೀಡಲಿದೆ.ಸಮಿತಿಗೆ ಅಗತ್ಯವಿದ್ದಲ್ಲಿ ಕಂದಾಯ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು/ನಿವೃತ್ತ ಅಧಿಕಾರಿಗಳು ಅಥವಾ ವಿಷಯ ತಜ್ಞರ ಸೇವೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಇದನ್ನು ಓದಿ:ರೈತರ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೆ?; ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು ವಿಭಾಗದ ಅಪರ ಪ್ರಾದೇಶಿಕ ಆಯುಕ್ತರು ಸದಸ್ಯ ಕಾರ್ಯದರ್ಶಿಯಾಗಿದ್ದರೆ, ಮೈಸೂರು, ಬೆಳಗಾವಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು, ಮೈಸೂರು, ಚಿಕ್ಕಮಗಳೂರು, ಬೆಳಗಾವಿ, ರಾಯಚೂರು, ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸದಸ್ಯರಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + nineteen =
Remember me
