ಬೆಂಗಳೂರು:ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್‌ಶಿಪ್ ಅಲೋಯನ್ಸ್) ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3500 ರೂ., ಅರಣ್ಯ ರಕ್ಷಕರಿಗೆ 2700 ರೂ. ಹಾಗೂ ಡಿ ದರ್ಜೆ ನೌಕರರಿಗೆ 2000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಇದರ ನಿಗ್ರಹಕ್ಕಾಗಿ ಆನೆ ಕಾರ್ಯಪಡೆ ರಚಿಸಲಾಗಿದೆ. ಇದರಲ್ಲಿ ಕಾರ್ಯ ನಿರ್ವಹಿಸುವ ಹೊರಗುತ್ತಿಗೆ ಸಿಬ್ಬಂದಿಯೂ ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಸಿಕ ಕರ್ತವ್ಯ ನಿರ್ವಹಿಸಿದ 6 ದಿನಗಳಿಗೆ 500 ರೂ. ಆಧಾರದಲ್ಲಿ ತಿಂಗಳಿಗೆ ಗರಿಷ್ಠ 2000 ರೂ. (ಷರತ್ತಿಗೆ ಒಳಪಟ್ಟು) ನೀಡಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ. ನರಸೀಪುರ, ಮಂಡ್ಯ, ಪಾಂಡವಪುರ, ನಾಗಮಂಗಲ ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಿರತೆ ಕಾರ್ಯಪಡೆ, ವನ್ಯ ಜೀವಿಗಳನ್ನು ಹಿಮ್ಮೆಟ್ಟಿಸುವ ಕ್ಷಿಪ್ರ ಸ್ಪಂದನಾ ಪಡೆ ಸಿಬ್ಬಂದಿ ಮತ್ತು ಅರಣ್ಯದೊಳಗಿರುವ ಕಳ್ಳಬೇಟೆ ಶಿಬಿರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರಿಗೂ ಇದು ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.
ತಾವು ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ಮತ್ತು ಹೊರಗುತ್ತಿಗೆ ನೌಕರರು ಚಳಿ, ಮಳೆ, ಗಾಳಿ ಎನ್ನದೆ ವನ್ಯಜೀವಿಗಳ ದಾಳಿಯ ಅಪಾಯದ ನಡುವೆಯೂ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವುದನ್ನು ಗಮನಿಸಿ ಈ ವಿಶೇಷ ಭತ್ಯೆ ನೀಡಲು ತೀರ್ಮಾನಿಸಿದ್ದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eleven =
Remember me
