ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ ನಾಯಕರಿಗೆ ಹೈಕೋರ್ಟ್‌ 10 ಸಾವಿರ ರೂ. ದಂಡ ವಿಧಿಸಿದೆ.
ಕಾರಣವೇನು?:ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.‌ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ನಾಯಕರು ರೇಸ್‌ಕೋರ್ಸ್‌ ರಸ್ತೆಯಲ್ಲಿ ಪ್ರತಿಭಟಿಸಿದ್ದರು.
2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ ದಂಡ ವಿಧಿಸಿದೆ.  ತಲಾ 10 ಸಾವಿರ ರೂಪಾಯಿ ಕಟ್ಟುವಂತೆ ಕೋರ್ಟ್​​ ಹೇಳಿದೆ.
ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಕೇಸ್‌ ಹಾಕಲಾಗುತ್ತದೆ.ಸಿದ್ದರಾಮಯ್ಯನವರಿಗೆ ಮಾರ್ಚ್‌ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ.
ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು; ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ ಎನ್​ಐಎ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 2 =
Remember me
