ಬೆಂಗಳೂರು:ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್​ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ತುರ್ತು ಸಭೆ ನಡೆಯಿತು.
ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಹಾಗೂ ತಳೆಯಬೇಕಾದ ನಿಲುವುಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯ ಸ್ವಾಮಿ, ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ನಾಗೇಂದ್ರ, ಮುಖ್ಯಮಂತ್ರಿಯವರ ಕಾನೂನುಸಲಹೆಗಾರ ಎ.ಎಸ್. ಪೊನ್ನಣ್ಣ, ಮುಖ್ಯಮಂತ್ರಿಯವರ ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಎಸಿಎಸ್ ರಜನೀಶ್ ಗೋಯಲ್, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಸೇರಿ ಸಂಬಂಧಪಟ್ಟ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ನಾಳೆ ಮತ್ತೆ ಸಭೆ:ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ನೇತೃತ್ವದಲ್ಲಿ ನಾಳೆ ವಿಧಾನಸಭಾ ಸಮ್ಮೇಳನ ಸಭಾಂಗಣದಲ್ಲಿ ಮತ್ತೆ ವಿಶೇಷ ತುರ್ತು ಸಭೆ ನಡೆಯಲಿದೆ.
ಮಧ್ಯಾಹ್ನ 12:30ರ ಸುಮಾರಿಗೆ ನಡೆಯಲಿರುವ ಈ ವಿಶೇಷ ತುರ್ತು ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರುಗಳು ಭಾಗವಹಿಸಲಿದ್ದಾರೆ.

ಕೆಲ ಪಾಪಿಷ್ಠರ ಪೂಜೆಯಿಂದ ಕಟ್ಟೆ ಬರಿದಾಗಿದೆ, ಕಾವೇರಿಗೆ ರಾಜಕಾರಣಿಗಳು ಬಾಗಿನ ಅರ್ಪಿಸುವುದು ಬೇಡ: ರೈತ ಮುಖಂಡರ ಮನವಿ

ಹದಿನೇಳೇ ನಿಮಿಷಗಳಲ್ಲಿ ಮದುವೆ; ಇದರ ಉದ್ದೇಶವೇ ಉದಾತ್ತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
