ಬೆಂಗಳೂರು:ಬಜೆಟ್​ನಲ್ಲಿ ಮಹದಾಯಿ ಯೋಜನೆ ಜಾರಿಗೆ ಹೆಚ್ಚಿನ ಅನುದಾನ ಮೀಸಲಿಟ್ಟು, ಶೀಘ್ರದಲ್ಲಿ ಕೆಲಸ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಮುತುವರ್ಜಿಯಿಂದ ಮಹದಾಯಿ ಅಧಿಸೂಚನೆ ಪ್ರಕಟವಾಗಿದ್ದು, ಬಹು ವರ್ಷಗಳ ಈ ಬೇಡಿಕೆ ಈಡೇರಿಕೆಗಾಗಿ ದೀರ್ಘಾವಧಿ ಚಳವಳಿಗಳು ನಡೆದಿವೆ. ಅಧಿಸೂಚನೆ ಹೊರಡಿಸಿರುವ ಕಾರಣ ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿ ಸುಗಮವಾಗಿದೆ.
ಮಹದಾಯಿಯಡಿ ನೀರು ಲಭ್ಯತೆಯಿಂದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದ್ದು, ನೀರಾವರಿ ಯೋಜನೆ ಅನುಷ್ಠಾನಕ್ಕೆ ಅನುಕೂಲವಾಗಲಿದೆ. ಅಧಿಸೂಚನೆ ಅನುಸಾರ ಕಳಸಾ ಬಂಡೂರಿ ನಾಲೆಗಳ ಮೂಲಕ ರಾಜ್ಯಕ್ಕೆ 13.5 ಟಿಎಂಸಿ ಮಹದಾಯಿ ನದಿ ನೀರು ಲಭ್ಯವಾಗಲಿದೆ ಎಂದು ತಿಳಿಸಿದರು.
ಮತ್ತಷ್ಟು ನೀರು ಸಿಗುವ ನಿರೀಕ್ಷೆ
ಮಹದಾಯಿ ವಿವಾದದ ಅಂತಿಮ ತೀರ್ಪು ಜುಲೈನಲ್ಲಿ ಹೊರಬೀಳುವ ಸಾಧ್ಯತೆ ಇದ್ದು, ಆಗ ರಾಜ್ಯಕ್ಕೆ ಮತ್ತಷ್ಟು ಹೆಚ್ಚಿನ ಪಾಲು ಸಿಗುವ ನಿರೀಕ್ಷೆ ಇದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಮಹದಾಯಿ ನದಿ ನೀರು ವಿಚಾರವಾಗಿ ಹಿರಿಯ ಸಚಿವರು ಮತ್ತು ಉತ್ತರ ಕರ್ನಾಟಕ ಭಾಗದ ಶಾಸಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೆವು. ಕೇಂದ್ರ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿದೆ.
ಹಾಗಾಗಿ ಪ್ರಧಾನಿ ಮೋದಿ ಮತ್ತು ನಮ್ಮ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು. ನೀರು ಭಾವನಾತ್ಮಕ ವಿಷಯ. ಹಾಗಾಗಿ ಯಾರೂ ಸಂಭ್ರಮಾಚರಣೆ ಮಾಡುವುದು ಬೇಡ ಎಂದು ಮನವಿ ಮಾಡಿದರು. ಮಹದಾಯಿ ಸೇರಿದಂತೆ ವಿವಿಧ ನೀರಾವರಿ ಹೋರಾಟಗಳಲ್ಲಿ ಭಾಗಿಯಾಗಿದ್ದ ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂಬುದು ನಮ್ಮ ಇಚ್ಛೆ. ಈ ಸಂಬಂಧ ಸಿಎಂ ಜತೆ ರ್ಚಚಿಸುವುದಾಗಿ ಹೇಳಿದರು.
ಖಾನಾಪುರ ತಾಲೂಕಿನ ಕಣಕುಂಬಿಗೆ ಶನಿವಾರ ಭೇಟಿ ನೀಡಿ, ನಡೆಯಬೇಕಾದ ಕಾಮಗಾರಿಯ ಸ್ಥಳ ಪರಿಶೀಲನೆ ಮಾಡುತ್ತೇನೆ.
| ರಮೇಶ್ ಜಾರಕಿಹೊಳಿ ಜಲಸಂಪನ್ಮೂಲ ಸಚಿವ
ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ವಿಳಂಬ ಮಾಡದೆ ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಈ ನೀರಿಗಾಗಿ ಉತ್ತರ ಕರ್ನಾಟಕ ಭಾಗದ ಜನರು ತುಂಬಾ ಹೋರಾಟ ಮಾಡಿದ್ದಾರೆ. ಕೇಂದ್ರದ ಕ್ರಮವನ್ನು ಸ್ವಾಗತಿಸುತ್ತೇನೆ.
| ಎಚ್.ಡಿ.ದೇವೇಗೌಡ ಮಾಜಿ ಪ್ರಧಾನಿ
ಮಹದಾಯಿ ನೀರು ಹಂಚಿಕೆ ಕುರಿತು ಕೇಂದ್ರ ಸರ್ಕಾರ ಅಧಿಸೂಚನೆ ಪ್ರಕಟಿಸುವ ಮೂಲಕ ರಾಜ್ಯದ ಬೇಡಿಕೆಗೆ ಸ್ಪಂದಿಸಿದೆ. ಮೊದಲ ಹಂತದ ಕಾನೂನು ಹೋರಾಟದಲ್ಲಿ ಜಯ ಸಿಕ್ಕಂತಾಗಿದೆ. ನಮ್ಮ ಪಾಲಿನ ನೀರನ್ನು ಅತ್ಯಂತ ಸಮರ್ಪಕವಾಗಿ ಬಳಸಕೊಳ್ಳಲು ಯೋಜನೆ ರೂಪಿಸಲಾಗುವುದು.
| ಬಸವರಾಜ ಬೊಮ್ಮಾಯಿ  ಗೃಹ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − three =
Remember me
