ಬೆಂಗಳೂರು:ಹಾಸನ ಸಂಸದ, ಲೋಕಸಭಾ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಇದೀಗ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿರ್ದೇಶಿಸಿದಂತೆ ಈ ಪ್ರಕರಣವನ್ನು ವಿಶೇಷ ತನಿಖಾ ದಳ (SIT) ಕೈಗೆತ್ತಿಕೊಂಡು, ಚುರುಕಿನ ತನಿಖೆ ಆರಂಭಿಸಿದೆ. ಈಗಾಗಲೇ ಮೂರು ಪ್ರತ್ಯೇಕ ತಂಡ ರಚಿಸಿರುವ ಎಸ್​ಐಟಿ, ಎಲ್ಲಾ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ:14 ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಂನಲ್ಲಿ ಭವಿಷ್ಯ ಭದ್ರ: ಮತಯಂತ್ರವಿರುವ ವಿಶ್ವವಿದ್ಯಾನಿಲಯದ ಸುತ್ತ ಸರ್ಪಗಾವಲು
ಲೋಕಸಭಾ ಚುನಾವಣೆಯ ಸಮೀಪದಲ್ಲಿ ಈ ಘಟನೆ ನಡೆದಿರುವುದು ಸದ್ಯ ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ್ದು, ಕಾಂಗ್ರೆಸ್​ ಪಕ್ಷದ ನಾಯಕರು ಪ್ರಜ್ವಲ್ ರೇವಣ್ಣ, ಎಚ್​.ಡಿ. ಕುಮಾರಸ್ವಾಮಿ ಕುಟುಂಬದ ವಿರುದ್ಧ ಕೆಂಡಕಾರಿದ್ದಾರೆ. ಪ್ರಜ್ವಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಪ್ರಕರಣದ ತನಿಖೆ ಆಗಲೇಬೇಕು, ತಕ್ಕ ಶಿಕ್ಷೆ ವಿಧಿಸಬೇಕು. ಈ ಪ್ರಕರಣ ಇಡೀ ರಾಜ್ಯವನ್ನೇ ತಲೆತಗ್ಗಿಸುವಂತೆ ಮಾಡಿದೆ ಎಂದು ಆರೋಪಿಸಿದ್ದಾರೆ. ಇನ್ನು ಲೈಂಗಿಕ ದೌರ್ಜನ್ಯ ವಿಡಿಯೋಗಳು ಹಾಗೂ ಪೆನ್​ಡ್ರೈವ್ ಬಗ್ಗೆ ಮಾಹಿತಿ ಕಲೆಹಾಕಿರುವ ಎಸ್​ಐಟಿ 40 ಜಿಬಿ ಪೆನ್​ಡ್ರೈವ್ ಅನ್ನು ವಶಪಡಿಸಿಕೊಂಡಿದೆ.
ವಿಡಿಯೋಗಳು ಹಾಗೂ ಪೆನ್​ಡ್ರೈವ್ ಬಗ್ಗೆ ತನಿಖೆ ನಡೆಸಲು ಎಸ್ಐಟಿಯಿಂದ ಮೂರು ತಂಡಗಳನ್ನು ರಚನೆ ಮಾಡಲಾಗಿದ್ದು, ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್​ಡ್ರೈವ್‍ಗಳನ್ನು ವಶಕ್ಕೆ ಪಡೆದಿದ್ದಾರೆ. 32 ಜಿಬಿ ಹಾಗೂ 8 ಜಿಬಿಯ ಪೆನ್​ಡ್ರೈವ್‍ಗಳನ್ನು ವಶಪಡಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).
ಇಬ್ಬರ ಜೀವನದಲ್ಲಿ ಮಧ್ಯಪ್ರವೇಶಿಸುವ ಹಕ್ಕು ಯಾವನಿಗೂ ಇಲ್ಲ: ಸಿಡಿದೆದ್ದ ಗೌತಮ್​ ಗಂಭೀರ್

ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಆರತಿ ಸಿಂಗ್! ಕೃಷ್ಣ-ಕಾಶ್ಮೀರ ದಂಪತಿಗೆ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
