|ರುದ್ರಣ್ಣ ಹರ್ತಿಕೋಟೆಬೆಂಗಳೂರು
ಐದಕ್ಕಿಂತ ಹೆಚ್ಚಿನ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುವ ಗೂಂಡಾಗಳ ಮೇಲೆ ಹದ್ದಿನ ಕಣ್ಣಿಡಲು ರಾಜ್ಯ ಸರ್ಕಾರ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ರಾಜ್ಯದಲ್ಲಿ ನಿಷೇಧಿತ ಸಂಘಟನೆಗಳ ಚಟುವಟಿಕೆಗಳು ಅಲ್ಲಲ್ಲಿ ಸದ್ದಿಲ್ಲದೇ ನಡೆಯುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಆದ್ದರಿಂದಲೇ ಕ್ರಿಮಿನಲ್​ಗಳ ಮೇಲೆ ನಿಗಾವಹಿಸುತ್ತಿದೆ.
ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಪ್ರಕರಣದಲ್ಲಿ ಆರೋಪಿಗೆ ಜೈಷ್-ಎ-ಮೊಹಮದ್ ಸಂಘಟನೆ ಜತೆಗೆ ಸಂಪರ್ಕ ಇರುವುದು ಪತ್ತೆಯಾಗಿತ್ತು. ಭಯೋತ್ಪಾದಕ ಸಂಘಟನೆಗಳ ಜತೆ ಇಲ್ಲಿನ ಕೆಲವರಿಗೆ ಸಂಪರ್ಕ ಇರುವುದು ಕಂಡು ಬಂದಿದೆ. ಅಲ್ಲಲ್ಲಿ ಉಗ್ರ ಸಂಘಟನೆಗಳ ಸದಸ್ಯರು ಬಂಧನಕ್ಕೆ ಒಳಗಾಗಿದ್ದಾರೆ. ಅಂತಹವರ ಜತೆಗೆ ಕ್ರಿಮಿನಲ್​ಗಳಿಗೆ ಸಂಬಂಧ ಇದೆಯೇ ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಕೆಲವರು ಈವರೆಗೂ ಯಾವುದೇ ಪ್ರಕರಣ ಎದುರಿಸದಿದ್ದರೂ ಇಂತಹ ಸಂಘಟನೆಗಳ ಜತೆ ಸಂಪರ್ಕದಲ್ಲಿರುವ ಮಾಹಿತಿ ಇದೆ.
ನಿಗಾ ಏಕೆ?:ಇದು ಚುನಾವಣೆ ವರ್ಷವಾಗಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಅಹಿತಕರ ಘಟನೆ ನಡೆದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಅದು ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಜತೆಗೆ ಹೂಡಿಕೆ ಬರುವುದಕ್ಕೂ ಅಡ್ಡಿಯಾಗುತ್ತದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಇರುವ ಹೆಸರು ಹಾಳಾಗದಂತೆ ನೋಡಿಕೊಳ್ಳಬೇಕಾಗಿದೆ. ಆದ್ದರಿಂದ ರೌಡಿಗಳು ಎಲ್ಲಿಯೂ ಬಾಲ ಬಿಚ್ಚದಂತೆ ಎಚ್ಚರಿಕೆ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗಿದೆ. ಕೆಲವು ಗಣ್ಯರ ಜೀವಕ್ಕೂ ಸಂಚು ರೂಪಿಸುವ ಸಾಧ್ಯತೆಗಳು ಇವೆ. ಅಂತಹ ಯಾವುದೇ ಪ್ರಕರಣ ನಡೆಯಬಾರದೆಂಬ ಉದ್ದೇಶದಿಂದ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ಎಲ್ಲ ಪೊಲೀಸ್ ಠಾಣೆಗಳಲ್ಲಿಯೂ ಈಗಾಗಲೆ ನಿಗಾವಹಿಸುವ ಕಾರ್ಯವನ್ನು ಆರಂಭಿಸಿದ್ದು, ಹೆಚ್ಚು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರ ಮಾಹಿತಿ ಸಂಗ್ರಹ ಮಾಡಲಾಗಿದೆ.
ಕ್ರಮಗಳೇನು?:ಕ್ರಿಮಿನಲ್​ಗಳು ಮತ್ತೆ ಅಪರಾಧದಲ್ಲಿ ತೊಡಗಿದರೆ ಅಂತಹವರ ಮೇಲೆ ಮೂರು ರೀತಿಯ ಶಿಕ್ಷೆ ವಿಧಿಸಲಾಗುತ್ತದೆ. ಗೂಂಡಾ ಕಾಯ್ದೆ ಅನ್ವಯ ಕ್ರಮ ಜರುಗಿಸುವುದು, ರಾಜ್ಯದಿಂದಲೇ ಗಡಿಪಾರು ಮಾಡುವುದು ಹಾಗೂ ಉತ್ತರಪ್ರದೇಶ ಮಾದರಿಯಲ್ಲಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ತಿದ್ದುಪಡಿಯ ಅಗತ್ಯವಿಲ್ಲ. ಈಗ ಇರುವ ಕಾನೂನಿನಲ್ಲಿಯೇ ಅವಕಾಶಗಳಿವೆ. ಪಿಎಸ್​ಐ ನೇಮಕ ಅಕ್ರಮದ ಆರೋಪಿಯ ಆಸ್ತಿ ಮುಟ್ಟುಗೋಲಿಗೆ ಸರ್ಕಾರ ಮುಂದಾಗಿತ್ತು. ಮತ್ತೊಂದು ಪ್ರಕರಣದಲ್ಲಿಯೂ ಇದೇ ರೀತಿಯಲ್ಲಿ ಮುಂದಾಗಿತ್ತು ಎಂದು ಮೂಲಗಳು ಹೇಳುತ್ತವೆ.
ಎಷ್ಟು ಜನರಿದ್ದಾರೆ?:ಐದಕ್ಕಿಂತ ಹೆಚ್ಚಿನ ಮೊಕದ್ದಮೆಗಳನ್ನು ಎದುರಿಸುತ್ತಿರುವ ರೌಡಿಗಳ ಸಂಖ್ಯೆ ನಿಖರವಾಗಿ ತಿಳಿದಿಲ್ಲ. ಆದರೆ, ಪ್ರತಿ ಪೊಲೀಸ್ ಠಾಣೆಗೂ ಈ ನಿಟ್ಟಿನಲ್ಲಿ ಸೂಚನೆ ಮಾತ್ರ ಕಳುಹಿಸಲಾಗಿದೆ. ಈಗಾಗಲೆ ಪ್ರಕರಣ ಮುಕ್ತಾಯವಾಗಿದ್ದರೂ ಸಹ ಅಂಥವರ ಮೇಲೂ ನಿಗಾವಹಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ಖಚಿತಪಡಿಸಿವೆ.
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗದಂತೆ ಎಚ್ಚರವಹಿಸುವ ಅಗತ್ಯವಿದೆ. ಆದ್ದರಿಂದಲೇ ಐದಕ್ಕಿಂತ ಹೆಚ್ಚಿನ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವ ರೌಡಿಗಳು, ಸಮಾಜಘಾತುಕ ಶಕ್ತಿಗಳ ಮೇಲೆ ನಿಗಾವಹಿಸಲು ಸೂಚನೆ ನೀಡಲಾಗಿದೆ.
|ಆರಗ ಜ್ಞಾನೇಂದ್ರಗೃಹ ಸಚಿವ
ಕೇಂದ್ರಕ್ಕೆ ಶಿಫಾರಸು:ಎಸ್​ಡಿಪಿಐ, ಪಿಎಫ್​ಐ ಸಂಘಟನೆಗಳನ್ನು ನಿಷೇಧ ಮಾಡುವಂತೆ ರಾಜ್ಯದಿಂದ ಸಂಪೂರ್ಣ ಮಾಹಿತಿ ಒಳಗೊಂಡ ವರದಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿದೆ. ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾ ಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ನಡೆದಿರುವ ಕೋಮುಗಲಭೆ, ಕೊಲೆ ಪ್ರಕರಣಗಳಲ್ಲಿ ಈ ಸಂಘಟನೆಗಳ ಪಾತ್ರವೇನು ಎಂಬುದನ್ನು ವಿವರವಾಗಿ ಮಾಹಿತಿ ನೀಡಲಾ ಗಿದೆ. ಕೇಂದ್ರ ಸರ್ಕಾರ ಈಗ ಮುಂದಿನ ನಿರ್ಧಾರವನ್ನು ಕೈಗೊಳ್ಳಬೇಕಾಗಿದೆ. ಎಸ್​ಡಿಪಿಐ ರಾಜಕೀಯ ಪಕ್ಷ ಆಗಿರುವುದರಿಂದ ಚುನಾವಣಾ ಆಯೋಗದ ಅಭಿಪ್ರಾ ಯವೂ ಮುಖ್ಯವಾಗಿದೆ ಎಂದು ಮೂಲಗಳು ಹೇಳುತ್ತವೆ.
ಗಣೇಶ ವಿಸರ್ಜನೆ ಶಾಂತಿಯುತ:ಸರ್ಕಾರ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡ ಪರಿಣಾಮ ಶಿವಮೊಗ್ಗ ಸೇರಿ ಎಲ್ಲ ಕಡೆ ಗಣೇಶ ವಿಸರ್ಜನೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಶಾಂತಿಯುತವಾಗಿ ನಡೆದಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 2 =
Remember me
