ಬೆಂಗಳೂರು:ಕಾಂಗ್ರೆಸ್​ನ ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಅವರ ಹೆಸರು ಬರಲಿ ಹಾಗೂ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಟಿಕೆಟ್ ಸಿಗಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು, ದೇಗುಲ ಮತ್ತು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪುಲಕೇಶಿನಗರದಲ್ಲಿನ ತಂಗಬೆಟ್ಟ ಸುಬ್ರಮಣ್ಯ ದೇಗುಲ ಹಾಗೂ ಮಸೀದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು, ಟಿಕೆಟ್​ಗಾಗಿ ವಿಶೇಷ ರೀತಿಯಲ್ಲಿ ಪೂಜೆ, ಪುನಸ್ಕಾರ ಮಾಡಿದರು.
ಕಾಂಗ್ರೆಸ್ ಹೈಕಮಾಂಡ್ ಬಳಿ ತೆರಳಿ ಅವರಲ್ಲಿ ಟಿಕೆಟ್​ಗಾಗಿ ಮನವಿ ಮಾಡಲು ಸಾಧ್ಯವಿಲ್ಲ, ಆದ್ದರಿಂದ ದೇವರ ಮೊರೆ ಹೋಗಿದ್ದೇವೆ. ಇಲ್ಲಿಯ ಪೂಜೆಯಿಂದ ಹೈಕಮಾಂಡ್ ಅಖಂಡ ಶ್ರೀನಿವಾಸ ಮೂರ್ತಿಯವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಿ ಎಂದು ಪ್ರಾರ್ಥಿಸಿದರು.
ಇದನ್ನೂ ಓದಿ:ಸ್ಲಂ-ಮುಕ್ತ ಮುಂಬೈ ಸಾಧ್ಯವೇ?: ಧಾರಾವಿ ಪುನರಾಭಿವೃದ್ಧಿ ಯೋಜನೆ ಟೆಂಡರ್ ಅದಾನಿಗೆ..

ಕಳೆದ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಅತೀ ಹೆಚ್ಚು ಅಂದರೆ, 81 ಸಾವಿರ ಮತಗಳಿಂದ ಅಮೋಘ ಗೆಲುವು ಸಾಧಿಸಿರುವ ಅಖಂಡ ಶ್ರೀನಿವಾಸ ಮೂರ್ತಿಯವರಿಗೆ ಈ ಬಾರಿ ಟಿಕೆಟ್ ನೀಡಲು ವಿಳಂಬವಾಗುತ್ತಿರುವುದಕ್ಕೆ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದರು.
ಅಖಂಡ ಶ್ರೀನಿವಾಸ ಮೂರ್ತಿಯವರಿಗೆ ಈ ಬಾರಿ ಟಿಕೇಟ್ ನೀಡಿದ್ದೇ ಆದ್ದಲ್ಲಿ ಅವರನ್ನು ಕಳೆದ ಬಾರಿಗಿಂತ ಇನ್ನೂ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುವಂತೆ ಮಾಡಲಾಗುವುದು ಎಂದು ಬೆಂಬಲಿಗರು ತಿಳಿಸಿದರು. ಹಾಗೆಯೇ ಅಖಂಡ ಶ್ರೀನಿವಾಸ ಮೂರ್ತಿಯವರ ಪರ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿದರು.
ದಿಕ್ಕೆಟ್ಟ ಸಂಸಾರ: ಪತ್ನಿಯ ಆರೈಕೆಗೆ ಬಂದಿದ್ದ ಶುಶ್ರೂಷಕಿಯತ್ತ ಆಕರ್ಷಣೆಗೊಂಡ ಪತಿ!

ಸುದೀಪ್​ ಹೇಳಿಕೆಯಿಂದ ಆಘಾತ ಹಾಗೂ ನೋವಾಗಿದೆ: ನಟ ಪ್ರಕಾಶ್​ ರಾಜ್​

ಮೋದಿ ಜತೆಗೆ ಕಾಣಿಸಿಕೊಂಡ ಅಭಿಷೇಕ್​ ಅಂಬರೀಷ್​; ಇಲ್ಲಿದೆ ವಿವರ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:six + 17 =
Remember me
