ದಕ್ಷಿಣ ಕನ್ನಡ:ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಗಾಯಾಳು ಮಹಿಳೆಯನ್ನು ಅಂಜಲಿ ಶೆಣೈ ಎಂದು ಗುರುತಿಸಲಾಗಿದೆ. ಆರೋಪಿ ಪೊಲೀಸ್​ ಠಾಣೆಯಲ್ಲಿ ಶರಣಾಗಿದ್ಧಾನೆ ಎಂದು ತಿಳಿದು ಬಂದಿದೆ.
ರಸ್ತೆ ಬದಿ ನಿಂತಿದ್ದ ಮಹಿಳೆಗೆ ಕಾರು ಡಿಕ್ಕಿ: ಮಹಿಳೆಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು#CrimeNews#roadacident#caraccident#womeningured#belthangady#hospitalized#roadaccidentnewspic.twitter.com/52HS6zilAf
ಇದನ್ನೂ ಓದಿ:ಕೊಳಲನೂದುತ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಿಸುತ್ತಿರುವ ಬಾಲಕ; ವಿಡಿಯೋ ವೈರಲ್
ವೈರಲ್​ ಆಗಿರುವ ವಿಡಿಯೋದಲ್ಲಿ ವೇಗವಾಗಿ ಬರುವ ವ್ಯಾಗನರ್​ ಕಾರೊಂದು ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರು ಹಾಗೂ ಮಹಿಳೆಗೆ ಡಿಕ್ಕಿ ಹೊಡೆಯುತ್ತದೆ. ಡಿಕ್ಕಿಯ ರಭಸಕ್ಕೆ ಮಹಿಳೆ ಒಂದಷ್ಟು ದೂರ ಬೀಳುತ್ತಾರೆ. ಜೋರಾದ ಶಬ್ದ ಕೇಳಿಸಿಕೊಂಡು ಕೂಡಲೇ ಸ್ಥಳೀಯರು ಮಹಿಳೆಯ ನೆರವಿಗೆ ಧಾವಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದ ಬಳಿಕ ಕಾರಿನ ಸಮೇತ ಪರಾರಿಯಾಗಿದ್ದ ಆರೋಪಿ ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾರು ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ಧಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fifteen − three =
Remember me
