ಬೆಂಗಳೂರು:ಕೊವಿಡ್​-19 ತಡೆಗಟ್ಟುವ ಕ್ರಮವಾಗಿ ರಾಜ್ಯ ಸರ್ಕಾರ ಇನ್ನೊಂದು ಪ್ರಮುಖ ಆದೇಶವನ್ನು ಹೊರಡಿಸಿದೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಪಾನ್​ ಮಸಾಲ ಸೇವಿಸುವುದು, ಉಗುಳುವುದನ್ನು ನಿಷೇಧಿಸಿದೆ.
ಇದನ್ನೂ ಓದಿ:VIDEO| ರವಿಚಂದ್ರನ್​ ಜನ್ಮದಿನಕ್ಕೆ ಕಿಚ್ಚನ ಶುಭಾಶಯ ಹೀಗಿದೆ ನೋಡಿ!
ತಂಬಾಕು, ಪಾನ್​ ಮಸಾಲಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದರಿಂದ ಕೊವಿಡ್​-19 ಸೇರಿ ಬೇರೆ ಕೆಲವು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹಾಗಾಗಿ ಇನ್ನು ಮುಂದೆ ಪಬ್ಲಿಕ್ ಪ್ಲೇಸ್​ಗಳಲ್ಲಿ, ಕಂಡಕಂಡಲ್ಲಿ ಪಾನ್​, ತಂಬಾಕನ್ನು ಉಗಿಯುವಂತಿಲ್ಲ.
ಇದನ್ನೂ ಓದಿ:ಸಂಕಷ್ಟದಲ್ಲಿವೆ ಶಾಪಿಂಗ್ ಮಾಲ್​ಗಳು; ಸಾವಿರಾರು ಜನರ ಉದ್ಯೋಗಕ್ಕೂ ಕುತ್ತು
ಹಾಗಂತ ಮಾರಾಟವೇನೂ ಬಂದ್​ ಆಗಿಲ್ಲ. ಒಮ್ಮೆ ಯಾರಾದರೂ ಆದೇಶವನ್ನು ಉಲ್ಲಂಘನೆ ಮಾಡಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಪಾನ್​ಮಸಾಲಗಳನ್ನು ಸೇವಿಸುವುದು, ಉಗಿಯುವುದು ಮಾಡಿದರೆ ಅಂಥವರ ವಿರುದ್ಧ ಐಪಿಸಿ ಸೆಕ್ಷನ್​ 188, 268, 269, 270 ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + two =
Remember me
