ಬೆಳ್ತಂಗಡಿ:ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕವಾಗಿ ನಡೆಯುವ ವಿಷುಮಾಸದ ಜಾತ್ರೆ ರದ್ದುಪಡಿಸಲಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಸಾಂಪ್ರದಾಯಿಕವಾಗಿ ನಡೆಯುವ ಧರ್ಮದೇವತೆಗಳ, ಅಣ್ಣಪ್ಪ ಸ್ವಾಮಿಯ ನೇಮ-ಕೋಲ, ಶ್ರೀಮಂಜುನಾಥ ಸ್ವಾಮಿಯ ರಥೋತ್ಸವ, ಕಟ್ಟೆ ವಿಹಾರ, ಅವಭೃತ ವಿಹಾರವನ್ನು ಸ್ಥಗಿತಗೊಳಿಸಲಾಗಿದೆ.
ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ, ದರ್ಶನವನ್ನು ಮುಂದಿನ ಸೂಚನೆ ತನಕ ರದ್ದುಪಡಿಸಲಾಗಿದೆ. ದೇವಪ್ರಶ್ನೆಯ ಮೂಲಕ ಶ್ರೀಸ್ವಾಮಿಯ ಒಪ್ಪಿಗೆ ಪಡೆದು ಪರಿವರ್ತನೆ ಗೊಂಡಿರುವುದರಿಂದ ಭಕ್ತರು ಯಾವುದೇ ಸಂಕೋಚ ಪಡಬೇಕಾಗಿಲ್ಲ. ಭಕ್ತರು ಕರೊನಾ ಸೋಂಕು ರೋಗ ಮುಕ್ತಿಗಾಗಿ ಪ್ರಾರ್ಥನೆ ಮಾಡಿ ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಮುಂದಿನ ದಿನಗಳ ಸುಭಿಕ್ಷೆಗಾಗಿ ಸರ್ಕಾರದ ಆದೇಶಗಳನ್ನು ಪರಿಪಾಲಿಸಬೇಕು ಎಂದು ತಿಳಿಸಿದ್ದಾರೆ.
ರಿಷಿಕೇಶದಲ್ಲಿ ಲಾಕ್​ಡೌನ್​ ಹೊರತಾಗಿಯೂ ವಿದೇಶಿಯರ ಸ್ವಚ್ಛಂದ ವಿಹಾರ, ಪೊಲೀಸರಿಂದ ಶಿಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 4 =
Remember me
