ಹುಬ್ಬಳ್ಳಿ:ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ ಅವರ ಕೊಲೆಯನ್ನು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಮತ್ತು ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಜಗದ್ಗುರುಗಳು, ಕಾಶೀ ಪೀಠದ ಡಾ.ಚಂದ್ರಶೇಖರ ಜಗದ್ಗುರುಗಳು ತೀವ್ರವಾಗಿ ಖಂಡಿಸಿದ್ದಾರೆ.
ವಿಜಯವಾಣಿಯೊಂದಿಗೆ ಮಾತನಾಡಿದ ಪಂಚಪೀಠದ ಜಗದ್ಗುರುತ್ರಯರು,ಮಕ್ಕಳ ಭವಿಷ್ಯವನ್ನು ಸೃಷ್ಟಿಸುವ ಜ್ಞಾನದೇಗುಲದ ಆವರಣದಲ್ಲಿ ಇಂತಹ ಘೋರಕೃತ್ಯ ನಡೆದಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಹ ವಿಚಾರ.ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ,ಆರೋಪಿಗೆ ಶೀಘ್ರವೇ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇಂತಹ ಪ್ರಕರಣಗಳಿಂದ ಹೆಣ್ಣುಮಕ್ಕಳನ್ನು ಶಾಲೆ–ಕಾಲೇಜಿಗೆ ಕಳುಹಿಸಲು ಪೋಷಕರು ಹಿಂದೆ ಸರಿಯುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಹಿಂದು ಹೆಣ್ಣುಮಕ್ಕಳನ್ನು ಪ್ರೀತಿ–ಪ್ರೇಮದ ಹೆಸರಿನಲ್ಲಿ ದಿಕ್ಕು ತಪ್ಪಿಸುವುದು,ಅದಕ್ಕೆ ಸಹಕರಿಸದಿದ್ದರೆ ಹತ್ಯೆಯನ್ನೇ ಮಾಡುವ ದುಸ್ಥಿತಿಗೆ ಇಳಿದಿರುವುದು ಸಮಾಜದ ದುರ್ದೈವ.ಹಿಂದು ಸಮಾಜ ಇನ್ನಾದರೂ ಜಾಗೃತರಾಗಿ ಇಂತಹ ದುಷ್ಕೃತ್ಯ ನಡೆದಾಗ ಜಾತಿ,ಮತ,ಪಂಥ ಎನ್ನದೆ ಒಕ್ಕೊರಲಿನಿಂದ ಖಂಡಿಸಬೇಕು.ಆರೋಪಿಗೆ ಕಠಿಣ ಶಿಕ್ಷೆಯಾದರೆ ಮಾತ್ರ ನೇಹಾಗೆ ನ್ಯಾಯ ಕೊಡಿಸದಂತಾಗುತ್ತದೆ ಎಂದು ಜಗದ್ಗುರುತ್ರಯರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
