ಬೆಂಗಳೂರು:ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಪನೆಯಾಗುತ್ತಿರುವುದರ ಹಿನ್ನೆಲೆಯಲ್ಲಿ ಎಲ್ಲೆಡೆ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಅಂತೆಯೇ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಶ್ರೀರಾಮೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಬ್ಯಾಟರಾಯನಪುರದ ಸ್ವಾಮಿ ವಿವೇಕಾನಂದ ನಗರದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮವು ಸೋಮವಾರ (ಜ.22) ಸಂಜೆ 4 ಗಂಟೆಯಿಂದ ಆರಂಭವಾಗಲಿದ್ದು, ಗಾಯಕ ಶಶಿಧರ ಕೋಟೆಯವರು ಶ್ರೀರಾಮನ ಭಕ್ತಿಗೀತೆಗಳ ಭಜನೆ ನಡೆಸಿಕೊಡಲಿದ್ದಾರೆ. ಹಾಗೂ ವಿವಿಧ ಕಲಾವಿದರಿಂದ ಗಾಯನ, ಭರತನಾಟ್ಯ, ಇನ್ನಿತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ವಿಶೇಷ ಆಕರ್ಷಣೆಯಾಗಿ ತಿಂಡಿ ಮೇಳವನ್ನು ಆಯೋಜಿಸಲಾಗಿದ್ದು, ದೋಸೆ ಹಬ್ಬ, ಕಡಲೆಕಾಯಿ ಪರಿಷೆ, ಅವರೆಕಾಯಿ ಪರಿಷೆ ನಡೆಯಲಿದೆ. ಅಂತಿಮವಾಗಿ ಸಂಜೆ ದೀಪೋತ್ಸವ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀರಾಮನ ಕೃಪೆಗೆ ಪಾತ್ರರಾಗಬೇಕೆಂದು ಕೇಸರಿ ೌಂಡೇಶನ್ ಸಂಸ್ಥಾಪಕ ಎಚ್.ಸಿ.ತಮ್ಮೇಶಗೌಡ ಮನವಿ ಮಾಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
