ಬೆಳಗಾವಿ: ಮಾರಕ ಕರೊನಾ ವೈರಸ್ ದೇಶದ ಹಲವೆಡೆ ಹರಡುತ್ತಿರುವುದರಿಂದ ಶ್ರೀಶೈಲದ ಯುಗಾದಿ ಜಾತ್ರೆಗೆ ಆಗಮಿಸುವ ಭಕ್ತರು ಯಾತ್ರೆ ಸ್ಥಗಿತಗೊಳಿಸಬೇಕು ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮನವಿ ಮಾಡಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರೊನಾ ಸೋಂಕು ಮಾರಣಾಂತಿಕವಾಗಿದೆ ಎಂದು ವೈದ್ಯಲೋಕ ತಿಳಿಸಿದೆ. ಸದ್ಯ ವೈರಸ್​ಗೆ ಯಾವುದೇ ಔಷಧ ಇಲ್ಲದ ಕಾರಣ ಇದು ಹರಡದಂತೆ ನಾವೆಲ್ಲರೂ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ ಎಂದರು.
ಕಾರ್ಯಕ್ರಮ ರದ್ದು: ಜಾತ್ರೆಗೆ ಬರುವ ಭಕ್ತರೆಲ್ಲರ ಅನುಕೂಲ ಮತ್ತು ಸಂತೋಷಕ್ಕಾಗಿ ಶ್ರೀಶೈಲ ಪೀಠದಿಂದ ಮಾ. 19 ರಿಂದ 23ರ ವರೆಗೆ ಐದು ದಿನ ಮಲ್ಲಯ್ಯನ ಭಕ್ತರ ಬೃಹತ್ ಸಮಾವೇಶ ಮತ್ತು ಅನೇಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. 21ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನೂ ಆಹ್ವಾನಿಸಲಾಗಿತ್ತು. ಆದರೆ. ಈ ಮಾರಣಾಂತಿಕ ಕರೊನಾ ಕಾರಣದಿಂದ ಈ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ಶ್ರೀಶೈಲ ಸ್ವಾಮೀಜಿ ತಿಳಿಸಿದರು.
ಹಾವೇರಿಯಲ್ಲಿ ಅಜ್ಜ-ಮೊಮ್ಮಗನಿಗೆ ಶಂಕಿತ ಕರೊನಾ ವೈರಸ್​; ಹಜ್​ ಯಾತ್ರೆಗೆ ಹೋಗಿಬಂದಿದ್ದವರಲ್ಲಿ ಕೆಮ್ಮು- ಜ್ವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
