ರಾಯಚೂರು:ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಶ್ರೀಮಠದಲ್ಲಿನ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಹಾಗೂ ಮೂಲ ರಾಮದೇವರ ಪೂಜೆ ನೆರವೇರಿಸುವ ಮೂಲಕ ಶನಿವಾರ ಚಾತುರ್ಮಾಸ್ಯ ದೀಕ್ಷೆ ಸ್ವೀಕರಿಸಿದರು.
ಶ್ರೀಮಠದ ಪೂರ್ವ ಪೀಠಾಧಿಪತಿಗಳು ನಡೆಸಿಕೊಂಡು ಬಂದ ಸಂಪ್ರದಾಯದಂತೆ ಮಂತ್ರಾಲಯದಲ್ಲಿಯೇ ಶ್ರೀ ಸುಬುಧೇಂದ್ರ ತೀರ್ಥರು ಎಂಟನೇ ಚಾತುರ್ಮಾಸ್ಯವನ್ನು ಕೈಗೊಂಡಿದ್ದು, ಸೆ.2ರಂದು ಪೂರ್ಣಗೊಳ್ಳಲಿದೆ.
ಇದನ್ನೂ ಓದಿರಿಅದ್ದೂರಿ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಬ್ರೇಕ್​
ರಾಯರ ಮೂಲ ಬೃಂದಾವನ ಮತ್ತು ಇತರ ಯತಿಗಳ ಬೃಂದಾವನಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಗಳಿಗೆ ಶ್ರೀಮಠದ ಅಧಿಕಾರಿಗಳು ವಸ್ತ್ರ ಸಮರ್ಪಣೆ ಮಾಡಿದರು. ನಂತರ ಶ್ರೀ ಸುಬುಧೇಂದ್ರ ತೀರ್ಥರು ಮೂಲ ರಾಮದೇವರ ಪೂಜೆ ನೆರವೇರಿಸಿ ಚಾತುರ್ಮಾಸ್ಯ ದೀಕ್ಷೆಯ ಧಾಮಿರ್ಕ ವಿಧಿ ವಿಧಾನಗಳನ್ನು ಪೂರೈಸಿದರು.
ಪ್ರತಿ ವರ್ಷದಂತೆ ಚಾತುರ್ಮಾಸ್ಯದ ಅವಧಿಯಲ್ಲಿ ನಡೆಸಲಾಗುತ್ತಿದ್ದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕರೊನಾ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದ್ದು, ಪೂಜೆ ಕಂಕೈರ್ಯಗಳು ಎಂದಿನಂತೆ ನಡೆಯಲಿವೆ.
video/ ‘ವಿಜಯವಾಣಿ’ ವರದಿ ಹಿಡಿದು ಸರ್ಕಾರಕ್ಕೆ ಚಾಟಿ ಬೀಸಿದ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 1 =
Remember me
