ಹುಬ್ಬಳ್ಳಿ:ಹುಬ್ಬಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕರಸೇವಕ ಶ್ರೀಕಾಂತ್​ ಪೂಜಾರಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ರಾಮಜನ್ಮಭೂಮಿ ಹೋರಾಟಕ್ಕೆ ಸಂಬಂಧಿಸಿದಂತೆ 1992ರಲ್ಲಿ ದೇಶಾದ್ಯಂತ ನಡೆದಿದ್ದ ಹೋರಾಟದ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆಗೆ ಸಂಬಂಧಿಸಿದಂತೆ ಶ್ರೀಕಾಂತ್​ ಪೂಜಾರಿ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿತ್ತು.
ಮೂವತ್ತು ವರ್ಷಗಳ ಹಿಂದಿನ ಹುಬ್ಬಳ್ಳಿ ಗಲಭೆ ಆರೋಪಿಯಾಗಿರುವ ಶ್ರೀಕಾಂತ್ ಪೂಜಾರಿ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಈತನ ಬಂಧನದ ಬಳಿಕ ರಾಮಮಂದಿರದ ಉದ್ಘಾಟನೆಯ ಸಂದರ್ಭ ಕರಸೇವಕನನ್ನು ರಾಜ್ಯ ಸರ್ಕಾರ ಬಂಧಿಸಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಬೆಳವಣಿಗೆ ರಾಜ್ಯದಲ್ಲಿ ರಾಜಕೀಯ ಕೆಸೆರೆರಚಾಟಕ್ಕೂ ಕಾರಣವಾಗಿತ್ತು.
ಇದನ್ನೂ ಓದಿ:ಭಾರತಕ್ಕೆ ಬೇಕಾಗಿದ್ದ ಮೋಸ್ಟ್​ ವಾಂಟೆಡ್ ಹಿಜ್ಬುಲ್ ಮುಜಾಹಿದ್ದೀನ್​ ಉಗ್ರ ಅರೆಸ್ಟ್​
ಈ ನಡುವೆ ಬಂಧಿತ ಶ್ರೀಕಾಂತ್ ಪೂಜಾರಿ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು, ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ. ಹುಬ್ಬಳ್ಳಿ ನಗರ ಠಾಣೆಯ ಪೊಲೀಸರು ಈತನನ್ನು ಬಂಧಿಸಿದ್ದರು.
ಡಿ. 05, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಹಿಂಸಾಚಾರ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಶ್ರೀಕಾಂತ್ ಪೂಜಾರಿ ಸೇರಿದಂತೆ ಒಟ್ಟು 9 ಮಂದಿ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿಜೆಪಿ ನಾಯಕರು ಶ್ರೀಕಾಂತ್ ಪೂಜಾರಿಯನ್ನು ಕರಸೇವಕ ಎಂದು ಹೇಳಿಕೊಂಡಿತ್ತು. ಹೀಗಾಗಿ, ಶ್ರೀಕಾಂತ್ ವಿರುದ್ಧ ಈ ಹಿಂದೆ ಅಂದರೆ 1992 ರಿಂದ 2014ರವರೆಗೆ ಒಟ್ಟು 16 ಪ್ರಕರಣಗಳು ದಾಖಲಾಗಿದ್ದಾಗಿ ಸ್ವತಃ ಸರ್ಕಾರವೇ ಮಾಹಿತಿ ನೀಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
