ಬೆಂಗಳೂರು:ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸುವ ಪಿಪಿಇ ಕಿಟ್​ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೆ ಎಲ್ಲೆಂದರಲ್ಲಿ ಬಿಸಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಸಿದ್ದಾರೆ.
ಇತ್ತೀಚಿಗೆ ಬಳಸಿದ ಪಿಪಿಇ ಕಿಟ್​ಗಳು ರಸ್ತೆಬದಿ, ಸ್ಮಶಾನದಲ್ಲಿ ಕಂಡು ಬಂದಿತ್ತು. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಈ ಕಿಟ್​ಗಳು ಎಲ್ಲೆಂದರಲ್ಲಿ ಕಾಣಸಿಗುತ್ತಿರುವುದು ಜನರಲ್ಲಿ ಮತ್ತಷ್ಟು ಭೀತಿ ಹುಟ್ಟಿಸಿದೆ. ಬೆಂಗಳೂರಿನ ಜೆ.ಸಿ.ನಗರದಲ್ಲಿ ಕರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸಿದ ಸಿಬ್ಬಂದಿ ಪಿಪಿಇ ಕಿಟ್ ಅನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದರಿಂದ ಸ್ಥಳೀಯರು ಆತಂಕಗೊಂಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡಿ ಸೋಂಕಿತರ ಅಂತ್ಯ ಸಂಸ್ಕಾರದ ವೇಳೆ ಸಿಬ್ಬಂದಿಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿತ್ತು.ಇದನ್ನೂ ಓದಿರಿಸ್ಮಶಾನದಲ್ಲೇ ಎಸೆದರು ಪಿಪಿಇ ಕಿಟ್​, ಸ್ಥಳೀಯರಲ್ಲಿ ಆತಂಕ
ಎಚ್ಚೆತ್ತ ಆರೋಗ್ಯ ಸಚಿವ ಶ್ರೀರಾಮುಲು, ಪಿಪಿಇ ಕಿಟ್​ಅನ್ನು ವೈಜ್ಞಾನಿಕವಾಗಿ ವಿಲೇ ಮಾಡದವರ ವಿರುದ್ಧ ಮುಲಾಜಿಲ್ಲದೇ ಅತ್ಯಂತ ಕಠಿಣ ಕ್ರಮ ಜರುಗಿಸಲಾಗುವುದು. ಯಾರೋ ಕೆಲವರ ನಿರ್ಲಕ್ಷ್ಯ ಜನಸಾಮಾನ್ಯರ ಪ್ರಾಣಕ್ಕೆ ಕಂಟಕ ತರಬಾರದು. ಸಂಬಂಧಿಸಿದ ಅಧಿಕಾರಿಗಳೇ ಇದಕ್ಕೆ ನೇರ ಹೊಣೆಗಾರರು ಎಂದು ಟ್ವೀಟ್​ ಮೂಲಕ ಎಚ್ಚರಿಸಿದ್ದಾರೆ.
#ಕೋವಿಡ್ಸೋಂಕಿತರ ಚಿಕಿತ್ಸೆಗೆ ಬಳಸುವ ಪಿಪಿಇ ಕಿಟ್ ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೇ ಎಲ್ಲೆಂದರಲ್ಲಿ ಬಿಸಾಕುತ್ತಿರುವುದು ಕಂಡುಬಂದರೆ,
ಅಂಥವರ ವಿರುದ್ಧ ಮುಲಾಜಿಲ್ಲದೇ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದುಯಾರೋ ಕೆಲವರ ನಿರ್ಲಕ್ಷ್ಯ ಜನಸಾಮಾನ್ಯರ ಪ್ರಾಣಕ್ಕೆ ಕಂಟಕವಾಗಬಾರದು.ಸಂಬಂಧಿಸಿದ ಅಧಿಕಾರಿಗಳೇ ಇದಕ್ಕೆ ಹೊಣೆಗಾರರು.
— B Sriramulu (@sriramulubjp)July 1, 2020

ಇನ್ನಾದರೂ ಕರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನಿಯಮದಂತೆಯೇ ಮಾಡಬೇಕು. ಈ ವೇಳೆ ಸ್ಥಳೀಯರಿಗೆ ತೊಂದರೆ ಆಗದಂತೆ, ಆತಂಕ ತಂದೊಡ್ಡುವ ಘಟನೆ ಸಂಭವಿಸದಂತೆ ಸಿಬ್ಬಂದಿ ಜಾಗ್ರತೆ ವಹಿಸಬೇಕಿದೆ.
ಸಪ್ತಪದಿ ತುಳಿದ ಐದೇ ದಿನಕ್ಕೆ ಮದುಮಗ ಸಾವು, 20 ಜನರಿಗೆ ಕೋವಿಡ್​ ಸೋಂಕು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − sixteen =
Remember me
