ಬಳ್ಳಾರಿ:ಆರೋಗ್ಯ ಖಾತೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೈತಪ್ಪಿದ ಬೆನ್ನಲ್ಲೇ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕಳೆದ ಸಂಪುಟ ವಿಸ್ತರಣೆ ವೇಳೆ ನಾನು ಬೇಡಿಕೆ ಇಟ್ಟಿದ್ದ ಸಮಾಜ ಕಲ್ಯಾಣ ಖಾತೆ ಈಗ ಸಿಕ್ಕಿದೆ ಎಂದ ಶ್ರೀರಾಮುಲು, ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೊಸ ಸಚಿವರಿಗೆ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಕೆಲವು ಖಾತೆಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ತಮಗೆ ಸಿಗದಿರುವುದನ್ನು ಶುಕ್ರವಾರ ನಗರದಲ್ಲಿ ಸುದ್ದಿಗಾರರ ಬಳಿ ಸಮರ್ಥಿಸಿಕೊಂಡರು.
ಅವಕಾಶಗಳಿಗಾಗಿ ಕಾಯಬೇಕಾಗುತ್ತದೆ. ಅವಕಾಶ ಸಿಕ್ಕಾಗ ಪಕ್ಷ ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಿದೆ. ಉಪ ಚುನಾವಣೆಯಲ್ಲಿ ಗೆಲ್ಲುವ ಸವಾಲಿದೆ. ಚುನಾವಣೆ ಗೆದ್ದ ಬಳಿಕ ಉಪ ಮುಖ್ಯಮಂತ್ರಿ ಸ್ಥಾನ ಕೇಳಲು ಅವಕಾಶ ಸಿಗಲಿದೆ. ಪಕ್ಷ ಕಷ್ಟಪಡುವವರನ್ನು ಗುರುತಿಸಲಿದ್ದು, ನನ್ನನ್ನು ಯಾವತ್ತೂ ಬಿಟ್ಟುಕೊಟ್ಟಿಲ್ಲ. ಮುಂದಿನ ದಿನಗಳಲ್ಲಿ ಉಪ ಮುಖ್ಯಮಂತ್ರಿ ಅವಕಾಶ ಸಿಗಬಹುದು ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಖಾತೆ ಮೂಲಕ ಪರಿಶಿಷ್ಟ ಸಮುದಾಯದವರ ಅಭಿವೃದ್ಧಿಗೆ ಅವಕಾಶ ಸಿಕ್ಕಿದೆ. ದೇವರಾಜ ಅರಸು ಕಾಲದಿಂದ ಇದುವರೆಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಅಧ್ಯಯನ ಕೈಗೊಂಡಿದ್ದೇನೆ ಎಂದು ಶ್ರೀರಾಮುಲು ಹೇಳಿದರು.
ಖಾತೆ ಕಿತ್ತುಕೊಂಡ ಬೆನ್ನಲ್ಲೇ ಖಾಸಗಿ ಕಾರನ್ನೇರಿ ಶ್ರೀರಾಮುಲು ಹೊರಟದ್ದೆಲ್ಲಿಗೆ?

VIDEO| ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲೇ ದಾಂಧಲೆ! ಭಕ್ತರ ಮೇಲೂ ಹಲ್ಲೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − eight =
Remember me
