ಶ್ರೀಶೈಲಂ:ವೀರಶೈವ ಲಿಂಗಾಯತ ಧರ್ಮದಲ್ಲಿ ಶ್ರೀಗುರುವಿನಿಂದ ಲಿಂಗದೀಕ್ಷೆಯನ್ನು ಯಾವುದೇ ಜಾತಿಭೇದವಿಲ್ಲದೇ ಸರ್ವರೂ ಪಡೆದುಕೊಳ್ಳಲು ಮುಕ್ತ ಅವಕಾಶವಿದ್ದು,ದೀಕ್ಷೆಯು ಮೋಕ್ಷಕ್ಕೆ ಮಹಾದ್ವಾರವಾಗಿದೆ ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಶ್ರೀಶೈಲದ ಜಗದ್ಗುರು ಸೂರ್ಯಸಿಂಹಾಸನ ಮಹಾಪೀಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಜರುಗಿದ ಸಾಮೂಹಿಕ ಅಯ್ಯಚಾರ ಮತ್ತು ಲಿಂಗದೀಕ್ಷೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಮನುಷ್ಯನಿಗೆ ಅನಾದಿಕಾಲದಿಂದ ಆಣವ,ಮಾಯಿಯ ಮತ್ತು ಕಾರ್ಮಿಕ ಎಂಬ ಮೂರು ಪ್ರಕಾರದ ಮಲಗಳು ಆವರಿಸಿವೆ.ಈ ಮಲಗಳೇ ಮನುಷ್ಯನ ಸಾಂಸಾರಿಕ ದುಃಖಗಳಿಗೆ ಮತ್ತು ಭವಬಂಧನಕ್ಕೆ ಕಾರಣವಾಗಿವೆ.ಶ್ರೀಗುರುವು ಇಷ್ಟಲಿಂಗ ದೀಕ್ಷೆ ಮತ್ತು ಅಯ್ಯಚಾರಗಳನ್ನು ನೀಡುವ ಸಂದರ್ಭದಲ್ಲಿ ವೇಧಾದೀಕ್ಷೆ,ಮಂತ್ರದೀಕ್ಷೆ ಮತ್ತು ಕ್ರಿಯಾದೀಕ್ಷೆ ಎಂಬ ಮೂರು ಪ್ರಕಾರದ ದೀಕ್ಷೆಗಳನ್ನು ನೀಡುವ ಮೂಲಕ ಮಲತ್ರಯಗಳನ್ನು ನಿವಾರಿಸಿ,ಶಿವಸ್ವರೂಪವಾದ ಇಷ್ಟಲಿಂಗವನ್ನು ದೇಹದಮೇಲೆ ಸದಾ ಧರಿಸಿಕೊಂಡು ಪ್ರತಿನಿತ್ಯ ಅದನ್ನು ತಪ್ಪದೆ ಪೂಜಿಸಬೇಕು.ಸದಾಚಾರ,ಸದ್ವಿಚಾರ ಸಂಪನ್ನನಾಗಿ ನಿಷ್ಠೆಯಿಂದ ಲಿಂಗಪೂಜಾ ಮಹಾವ್ರತವನ್ನು ಪರಿಪಾಲಿಸುವ ವ್ಯಕ್ತಿಯು ಸುಲಭವಾಗಿ ಮೋಕ್ಷವನ್ನು ಪಡೆಯುತ್ತಾನೆ.ಪಂಚಪೀಠಗಳು ಸನಾತನ ಕಾಲದಿಂದಲೂ ಯಾವುದೇ ತಾರತಮ್ಯವಿಲ್ಲದೇ ಸರ್ವ ಜನರಿಗೂ ಧರ್ಮದ ಸಂಸ್ಕಾರಗಳನ್ನು ನೀಡುವುದರ ಜೊತೆಗೆ ನೈತಿಕ ಮಾರ್ಗದರ್ಶನವನ್ನು ಮಾಡುತ್ತಾ ಬಂದಿವೆ.ಇದೇ ಹಾದಿಯಲ್ಲಿ ಬಸವಾದಿ ಶಿವಶರಣರು ನಡೆದ ಬಂದ ಪರಿ ಗೌರವಾರ್ಹವಾಗಿದೆ ಎಂದು ಜಗದ್ಗುರುಗಳು ವಿವರಿಸಿದರು.
ಕಾರ್ಯಕ್ರಮದಲ್ಲಿ ಗುರುಗುಂಟದ ಶ್ರೀಸದಾನಂದ ಶಿವಾಚಾರ್ಯ ಸ್ವಾಮಿಗಳು,ವಿಜಯಪುರದ ಶ್ರೀಸಿದ್ದಲಿಂಗ ಸ್ವಾಮೀಜಿ,ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಉಪಪ್ರಧಾನ ಅರ್ಚಕರಾದ ಶಿವಶಂಕರ ಶಾಸ್ತ್ರಿಗಳು,ವೀರಶೈವ ಗುರುಕುಲದ ಪ್ರಾಚಾರ್ಯರಾದ ಮಲ್ಲಿಕಾರ್ಜುನ ಶಾಸಿಗಳು,ಜಂಗಮ ಸಮಾಜದ ಕಾರ್ಯದರ್ಶಿ ನಟರಾಜ್ ಮತ್ತಿತರರು ಭಾಗವಹಿಸಿದ್ದರು.ನೂರಾರು ಜಂಗಮ ವಟುಗಳು ಅಯ್ಯಚಾರ ಮತ್ತು ಅನೇಕ ಭಕ್ತರು ಲಿಂಗದೀಕ್ಷೆಯನ್ನು ಪಡೆದುಕೊಂಡರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 2 =
Remember me
