ಬೆಂಗಳೂರು:ಪ್ರತಿವರ್ಷದಂತೆ ಗುರುಪೌರ್ಣಿಮೆ ಅಂಗವಾಗಿ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಇಷ್ಟಲಿಂಗ ಮಹಾಪೂಜೆ ಹಾಗೂ ಶ್ರೀಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನ ಕಾರ್ಯಕ್ರಮವು ಜು.16 ರಿಂದ 21 ರವರೆಗೆ ಆಯೋಜಿಸಲಾಗಿದೆ.
ವಿಜಯನಗರದಲ್ಲಿರುವ ಶ್ರೀಬಸವೇಶ್ವರ ಸುಜ್ಞಾನ ಮಂಟಪಲ್ಲಿ ಪ್ರತಿದಿನ ಬೆಳಗ್ಗೆ 7 ಗಂಟೆಯಿಂದ ಜಗದ್ಗುರುಗಳ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಹಾಗೂ ಸಂಜೆ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ. ಜು.16ರಂದು ಮಾಜಿ ಲೋಕಾಯುಕ್ತರಾದ ನ್ಯಾಯಮೂರ್ತಿ ಸುಭಾಷ್ ಬಿ.ಆಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕರು ಹಾಗೂ ಮಾಜಿ ಸಚಿವ ಎಂ.ಕೃಷ್ಣಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ನಂತರ ಪ್ರತಿದಿನ ಎಲ್ಲ ಭಕ್ತರಿಗೂ ದಾಸೋಹ ವ್ಯವಸ್ಥೆ ಇರಲಿದೆ.
6 ದಿನಗಳ ಕಾರ್ಯಕ್ರಮದ ಮಾರ್ಗದರ್ಶನವನ್ನು ವಿಭೂತಿಪುರು ವೀರಸಿಂಹಾಸನ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮಿಗಳು, ಶಿವಗಂಗೆ ಮಠದ ಡಾ.ಮಲಯಶಾಂತಮುನಿ ಶಿವಾಚಾರ್ಯ ಸ್ವಾಮಿಗಳು ಮಾಡಲಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೆಂದ್ರ, ಸಚಿವರಾದ ಎಂ.ಬಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ, ಸತೀಶ್ ಜಾರಕಿಹೊಳಿ, ಸಂಸದರಾದ ಗೋವಿಂದ ಕಾರಜೋಳ, ಪ್ರಿಯಾಂಕ ಜಾರಕಿಹೊಳಿ, ಡಾ.ಪ್ರಭಾ ಮಲ್ಲಿಕಾರ್ಜುನ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ವಿವಿಧ ಮುಖಂಡರು, ಗಣ್ಯರು ಪಾಲ್ಗೊಳ್ಳಲಿದ್ದಾರೆ.
ವಿಶೇಷವಾಗಿ ಜು.21ರಂದು ಗುರು ಪೂರ್ಣಿಮೆ ಅಂಗವಾಗಿ ಶ್ರೀಶೈಲ ಜಗದ್ಗುರು ಪಾದಪೂಜೆ ಹಾಗೂ ಗುರುವಂದನೆ ನಡೆಯಲಿದೆ. ಅಂದು ಸಂಜೆ ಶ್ರೀಪತಿ ಪಂಡಿತಾರಾಧ್ಯ ಭಗವತ್ಪಾದರ ಜಯಂತಿ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರಿಗೆ ‘ಪಂಚಾಚಾರ್ಯ ಸೇವಾ ಭೂಷಣ’ ಪ್ರಶಸ್ತಿ, ಪಂಡಿತ್ ವಿಶ್ವನಾಥ ಶಾಸಿಗಳಿಗೆ ‘ವೇದ ಭಾಸ್ಕರ’ ಪ್ರಶಸ್ತಿ, ಶಿವರುದ್ರ ಗವಾಯಿಗಳಿ ‘ನಾದ ಭಾಸ್ಕರ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರತಿದಿನ ಬೆಳಗ್ಗೆ ಪೂಜೆ ಮತ್ತು ಸಂಜೆಯ ಆಶೀರ್ವಚನ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಆಗಮಿಸುವಂತೆ ಶ್ರೀಶೈಲ ಜಗದ್ಗುರುಗಳ ಕಾರ್ಯಕ್ರಮ ಸೇವಾ ಸಮಿತಿಯ ಅಧ್ಯಕ್ಷರಾದ ಬಿ.ಎಸ್.ಪರಮಶಿವಯ್ಯ ಭಕ್ತರಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
