ಬೆಂಗಳೂರು:ಕರೊನಾ ಲಾಕ್​ಡೌನ್​ ಆರಂಭವಾದಾಗಿನಿಂದ ಮುಚ್ಚಿದ್ದ ಶಾಲೆಗಳು ಜನವರಿ 1ರಿಂದ ಮತ್ತೆ ಬಾಗಿಲು ತೆರೆದಿದ್ದು, ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯು ಮಕ್ಕಳು ಇದೀಗ ಶಾಲೆಗೆ ತೆರಳಲು ಆರಂಭಿಸಿದ್ದಾರೆ. ಶಾಲೆ ತೆರೆದು ಒಂದು ವಾರದೊಳಗೇ ಪರೀಕ್ಷೆಯನ್ನೂ ನಿಗದಿ ಮಾಡಲಾಗಿದೆ.
ಇದನ್ನೂ ಓದಿ:VIDEO: ಅಯ್ಯೋ ಈ ಸಿಂಹ ನಿಮ್ಗೆ ಏನೂ ಮಾಡಲ್ಲ… ಹೆದರಿಕೊಳ್ಬೇಡಿ… ಅಂದ್ರೆ ನಂಬಿಬಿಡ್ತೀರಾ?
ರಾಜ್ಯದಲ್ಲಿ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದೆ. ಹಾಗೆಯೇ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಅವರು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುಲು ಆ ಐವರು ಕಾರಣ, ಹಾಗಾಗಿ ಈಶ್ವರಪ್ಪಗೆ ಸಿಎಂ ಗಾದಿ ಕೊಡಿ…
ದ್ವಿತೀಯ ಪಿಯು ಮತ್ತು 10ನೇ ತರಗತಿಗಳ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಲಾಗಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ, ಆದರೆ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಜೂನ್ ಮೊದಲ ವಾರದಿಂದ ಪ್ರಾರಂಭವಾಗಲಿವೆ.
— S.Suresh Kumar (@nimmasuresh)January 6, 2021

ಬ್ಯಾಚಲರ್ ಹುಡುಗರಿದ್ದ ಮನೆಯಲ್ಲಿ ವಿವಾಹಿತೆಯ ಶವ!; ಕೆಲಸಕ್ಕೆಂದು ಹೋಗಿದ್ದವಳು ಅಲ್ಲೇಕೆ ಹೋದಳು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 1 =
Remember me
