ಬೆಂಗಳೂರು:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.25ರಿಂದ ಏ.6ರವರೆಗೆ ನಡೆಸಿದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಹಿಂದಿನಂತೆ ಈ ವರ್ಷವೂ ಕೂಡಾ ಬಾಲಕಿಯರೆ ಮೇಲು ಗೈ ಸಾಧಿಸಿದ್ದಾರೆ. ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶೇಷ ಎಂದರೆ ಒಬ್ಬಳೇ ವಿದ್ಯಾರ್ಥಿನಿ 625ಕ್ಕೆ 625 ಅಂಕವನ್ನು ಪಡೆದುಕೊಂಡಿದ್ದಾಳೆ.
2024ರ ಮಾ.25ರಿಂದ 2024ರ ಏಪ್ರಿಲ್ 6ರವರೆಗೆ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ-1ರಲ್ಲಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 6,31,204 ವಿದ್ಯಾರ್ಥಿಗಳು ಪಾಸ್​​ ಆಗಿದ್ದು ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
2,87,416 (65.90%) ಬಾಲಕರು ಪಾಸ್ ಆಗಿದ್ದು 3,43,788 (81.11%) ಬಾಲಕಿಯರು ಪಾಸ್​ ಆಗಿದ್ದಾರೆ. ಈ ಮೂಲಕ SSLC ಪರೀಕ್ಷೆಯಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇನ್ನು ಉಡುಪಿ ಪ್ರಥಮ ಸ್ಥಾನ(94%) ಪಡೆದಿದೆ. ದ್ವಿತೀಯ ಸ್ಥಾನ ದಕ್ಷಿಣ ಕನ್ನಡ(92.12%) ಜಿಲ್ಲೆಗೆ ಸಿಕ್ಕಿದ್ದು ಶಿವಮೊಗ್ಗ (88.67%) ಮೂರನೇ ಸ್ಥಾನ ಪಡೆದಿದೆ. ಇನ್ನು ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲೆ ಯಾದಗಿರಿ (50.59%).
ಬಾಗಲಕೋಟೆಯ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿರುವ ಅಂಕಿತಾ ಬಸಪ್ಪ ಎನ್ನುವ ವಿದ್ಯಾರ್ಥಿನಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ರಾಜ್ಯದಲ್ಲಿ 625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿಯಾಗಿದ್ದಾಳೆ.
7 ವಿದ್ಯಾರ್ಥಿಗಳಿಗೆ 625ಕ್ಕೆ 624  ಅಂಕಗಳು ಬಂದಿವೆ. ದಕ್ಷಿಣ ಕನ್ನಡದ ಚಿನ್ಮಯ್​ , ​ ಚಿಕ್ಕೊಡಿಯ ಸಿದ್ದಾಂತ್,  ಮಧುಗಿರಿಯ ಹರ್ಷಿತಾ ಡಿ. ಎಂ, ಬೆಂಗಳೂರಿನ ವೇದಾ ಪಿ ಶೆಟ್ಟಿ, ಉಡುಪಿಯ ಸಹನಾ, ಶಿರಸಿಯ ದರ್ಶನ್​​, ಚಿನ್ಮಯ್​, ಸಿದ್ದಾಂತ್​ ಕೂಡಾ ಡ್ವೀತಿಯ ಸ್ಥಾನದಲ್ಲಿದ್ದಾರೆ.
ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಹಾಟ್​​ ಬ್ಯೂಟಿ ಜ್ಯೋತಿ ರೈ ಯಾರು ಗೊತ್ತಾ? ಮಂಗಳೂರಿಗೂ ಈಕೆಗೂ ಇರುವ ನಂಟೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರು, ಗ್ರಾಮೀಣ ವಿದ್ಯಾರ್ಥಿಗಳದ್ದೇ ಮೇಲುಗೈ


ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:20 − nine =
Remember me
