ಬೆಂಗಳೂರುಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ನಿಷ್ಪಕ್ಷಪಾತ, ಪಾರದರ್ಶಕವಾಗಿ ಮತ್ತು ಎಚ್ಚರಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದೆ.
ಮೌಲ್ಯಮಾಪನ ಕಾರ್ಯದ ಸಮಬಂಧ ಡಿಡಿಪಿಐ ಗಳು ನಿರ್ವಹಿಸಬೇಕಾದ ಕರ್ತವ್ಯ ಮತ್ತು ಜವಾಬ್ದಾರಿಗಳ ಮಾರ್ಗಸೂಚಿಯನ್ನು ಮಂಡಳಿಯು ಪ್ರಕಟಿಸಿದೆ.
ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ರಾಜ್ಯಾದ್ಯಂತ ಏ.15ರಿಂದ ಏಕಕಾಲದಲ್ಲಿ ಆರಂಭಗೊಳ್ಳಲಿದೆ. ಅದಕ್ಕೂ ಮೊದಲು ಮೌಲ್ಯಮಾಪನ ಕೇಂದ್ರಕ್ಕೆ ವ್ಯವಸ್ಥಾಪಕರು ಏ7ರಂದು ಬೆಳಗ್ಗೆ 10 ಗಂಟೆಗೆ ಹಾಜರಾಗಬೇಕು. ಏ.10ರಂದು ಜಂಟಿ ಮುಖ್ಯ ಮೌಲ್ಯಮಾಪಕರ ವೀಡಿಯೋ ಸಂವಾದ ನಡೆಸಬೇಕು. ಉತ್ತರ ಏ.12ರಂದು ಮೌಲ್ಯಮಾಪನ ಕೇಂದ್ರಕ್ಕೆ ಜಂಟಿ ಮುಖ್ಯ ಮೌಲ್ಯಮಾಪಕರು ಹಾಜರಾಗಬೇಕು. ಏ.13ರಂದು ಉಪ ಮುಖ್ಯ ಮೌಲ್ಯಮಾಪಕರು ಹಾಜರಾಗಬೇಕು. ಏ.15ರಂದು ಮೌಲ್ಯಮಾಪನ ಕೇಂದ್ರಕ್ಕೆ ಸಹಾಯಕ ಮೌಲ್ಯಮಾಪಕರು ಹಾಜರಾಗಬೇಕು ಎಂದು ಸೂಚನೆ ನೀಡಿದೆ.
ಮೂಲಸೌಕರ್ಯ ಒದಗಿಸಿ:
ಜಿಲ್ಲಾ ಉಪ ನಿರ್ದೇಶಕರು ಮೌಲ್ಯಮಾಪಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಆಸನ ವ್ಯವಸ್ಥೆ, ಸುಭದ್ರತೆ ಕಲ್ಪಿಸಬೇಕು. ಡಿ-ಗ್ರೂಪ್ ನೌಕರರನ್ನು ನಿಯೋಜಿಸಿ ಮೌಲ್ಯಮಾಪನ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಮೌಲ್ಯಮಾಪಕರು ಸಕಾಲದಲ್ಲಿ ಹಾಜರಾಗುವಂತೆ ಕ್ರಮ ಕೈಗೊಳ್ಳುವುದು. ಮೊಬೈಲ್ ೆನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ರಾಜಕೀಯ ವ್ಯಕ್ತಿಗಳ ಬಗ್ಗೆ ಎಚ್ಚರ ವಹಿಸಿ:
ಚುನಾವಣಾ ಸಮಯವಾಗಿರುವುದರಿಂದ ವಿವಿಧ ಪಕ್ಷದ ಜನಪ್ರತಿನಿಧಿಗಳು, ರಾಜಕೀಯ ವ್ಯಕ್ತಿಗಳು ಮೌಲ್ಯಮಾಪನ ಕೇಂದ್ರಕ್ಕೆ ಭೇಟಿ ನೀಡುವ ಸಂಭವ ಇರುವುದರಿಂದ ರಾಜಕೀಯ ವ್ಯಕ್ತಿಗಳು ಮೌಲ್ಯಮಾನ ಕೇಂದ್ರಕ್ಕೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಯಾವುದೇ ವ್ಯಕ್ತಿಗಳು ಕೇಂದ್ರವನ್ನು ಪ್ರವೇಶಿಸುವುದು ಕಾನೂನುಬಾಃಇರವಾಗಿರುತ್ತದೆ. ಕೇಂದ್ರಗಳ ಶಾಲಾ ಕಟ್ಟಡದ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ೋಷಿಸಲು ಕ್ರಮ ಕೈಗೊಳ್ಳುವುದು.ಯಾವುದೇ ಪ್ರಾಯೋಜಕರಿಂದ ಊಟ, ತಿಂಡಿ, ಕಾಫೀ/ಟೀಯನ್ನು ಪಡೆಯಬಾರದು. ಮೌಲ್ಯಮಾಪನದ ವೇಳೆ ಯಾವುದೇ ಸಭೆ ಮತ್ತು ಪ್ರಚಾರಗಳಿಗೆ ಅವಕಾಶ ನೀಡಬಾರದು ಎಂದು ಮಂಡಳಿ ನಿರ್ದೇಶಕರು ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
