ಬೆಂಗಳೂರು: ಕರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ 2020ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬದಲು ಹಾಗೇ ಪಾಸ್ ಮಾಡುವುದು ಸೂಕ್ತ ಎಂದು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಸಿದ್ಧಲಿಂಗಯ್ಯ ಎಸ್. ಹಿರೇಮಠ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.
ಈಗಾಗಲೇ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಈ ಹಿಂದಿನ ಪರೀಕ್ಷೆಯ ಆಧಾರದ ಮೇಲೆ ಉತ್ತೀರ್ಣ ಮಾಡಿರುವ ರೀತಿಯಲ್ಲೇ ಎಸ್ಸೆಸ್ಸೆಲ್ಸಿ ಮಕ್ಕಳನ್ನೂ ಪಾಸ್ ಮಾಡಬೇಕು. ಧಾರವಾಡ ವ್ಯಾಪ್ತಿಯಲ್ಲಿ 700ಕ್ಕಿಂತ ಹೆಚ್ಚು ಪರೀಕ್ಷಾ ಕೇಂದ್ರಗಳಿದ್ದು, 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟ. ಈ ಹಿನ್ನೆಲೆಯಲ್ಲಿ ಈ ಹಿಂದೆ ನಡೆಸಿದ ಪರೀಕ್ಷೆಯ ಆಧಾರದ ಮೇಲೆ ಗ್ರೇಡಿಂಗ್ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಕಾರಣ ಕೇಳಿ ನೋಟಿಸ್ ಜಾರಿ
ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಪ್ರಸ್ತಾವನೆ ನೋಡಿ ಆಶ್ಚರ್ಯಗೊಂಡ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ , ಕಾರಣ ಕೇಳಿ ನೋಟಿಸ್ ಜಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ ತಮ್ಮ ಕಾರ್ಯವ್ಯಾಪ್ತಿ ಮೀರಿದ್ದಾರೆ. ಇಲಾಖೆಯ ಅಧಿಕಾರಿಗಳು ಸರ್ಕಾರವು ಕಾಲಕಾಲಕ್ಕೆ ರೂಪಿಸುವ ನೀತಿ ಅನುಷ್ಠಾನದ ಜವಾಬ್ದಾರಿಯನ್ನು ಮಾತ್ರ ಹೊಂದಿರುತ್ತಾರೆ. ಇಂಥ ನಿರ್ಣಯ ತೆಗೆದುಕೊಳ್ಳುವುದು ಸಮಂಜಸವಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಬೆಟ್ಟದ ಬುಡ…ಹೊಲಗಳಿಂದ ನುಸುಳಿ ಬರುತ್ತಿದ್ದಾರೆ ಅವರು…; ತುಮಕೂರಿನ ಗಡಿ ಗ್ರಾಮಗಳಲ್ಲಿ ಸೃಷ್ಟಿಯಾಗಿದೆ ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nine =
Remember me
