ಬೆಂಗಳೂರು:ಕರೊನಾ ಭೀತಿ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಎಲ್ಲ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಭಾನುವಾರ ತಿಳಿಸಿದ್ದು, ಇದುವರೆಗೂ ವಿದ್ಯಾರ್ಥಿಗಳಲ್ಲಿ ಇದ್ದ ಗೊಂದಕ್ಕೆ ಕೊನೆಗೂ ಸ್ಪಷ್ಟನೆ ಸಿಕ್ಕಿದೆ.
ಪರೀಕ್ಷೆಯನ್ನು ಮುಂದೂಡುವಂತೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪಾಲಕರು ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದರು. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟ ನಿಲುವು ತೆಗದುಕೊಂಡಿರಲಿಲ್ಲ. ಇದೀಗ ಸ್ವತಃ ಮುಖ್ಯಮಂತ್ರಿಗಳೇ ಘೋಷಣೆ ಮಾಡಿರುವುದರಿಂದ ಪಾಲಕರು ನಿಟ್ಟುಸಿರುವ ಬಿಡುವಂತಾಗಿದೆ. 27.03.2020ರಿಂದ ಪ್ರಾರಂಭವಾಗಬೇಕಿದ್ದ ಪರೀಕ್ಷೆಯನ್ನು ಸದ್ಯ ಮುಂದೂಡಲಾಗಿದೆ. ಏಪ್ರಿಲ್​ ಮೊದಲ ವಾರದಲ್ಲಿ ಪರೀಕ್ಷಾ ದಿನಾಂಕಗಳು ಘೋಷಣೆಯಾಗಲಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇನ್ನು 15 ದಿನ ಯಾರೂ ಕೂಡ ಹಳ್ಳಿಗೆ ಹೋಗಬೇಡಿ, ಈಗಾಗಲೇ ಹಳ್ಳಿಗಳಲ್ಲಿ ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ಹಳ್ಳಿಗಳಿಗೆ ಹೋಗಬೇಡಿ, ಕೈ ಮುಗಿಯುತ್ತೇನೆ ಎಂದು ಮನವಿ ಮಾಡಿದರು. ರಾಜ್ಯದ ಗಡಿಭಾಗವನ್ನು ಸಂಪೂರ್ಣ ಮುಚ್ಚಲಾಗಿದೆ. ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಮಾಡಲಾಗಿದೆ. ಬಾಲಬ್ರೂಯಿ ಅತಿಥಿ ಗೃಹವನ್ನು ಕೊರೊನಾ ತಡೆಯ ವಾರ್ ರೂಂ ಆಗಿ ತೆರೆಯಲಾಗಿದೆ ಎಂದು ತಿಳಿಸಿದರು.
ಜನತೆ ಗಾಬರಿಯಾಗುವ ಅಗತ್ಯವಿಲ್ಲ. ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದರು. ವಿಕ್ಟೊರಿಯಾ ಆಸ್ಪತ್ರೆಯಲ್ಲಿನ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು. ಆಸ್ಪತ್ರೆಯಲ್ಲಿ 1700 ಹಾಸಿಗೆಯ ವಿಶೇಷ ಕರೊನಾ ಚಿಕಿತ್ಸಾ ಸಮುಚ್ಚಯವಾಗಿ ಮೀಸಲಿಡಲಾಗುವುದು ಎಂದರು.
ಎಲ್ಲಾ ಸ್ಥಳೀಯ ಸಂಸ್ಥೆಗಳು ಮುಂದೂಡಲಾಗಿದೆ. ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್-19 ಪರೀಕ್ಷೆಗೆ ಪರವಾನಗಿ ನೀಡಲು ತೀರ್ಮಾನಿಸಲಾಗಿದೆ. ಟಾಸ್ಕ್ ಫೋರ್ಸ್ ಮಾದರಿಯಂತೆ ಜಿಲ್ಲಾ ಮಟ್ಟದಲ್ಲಿ ನುರಿತ ವೈದ್ಯರ ತಂಡದಿಂದ ವೈದ್ಯಕೀಯ ಕಾರ್ಯ ನಡೆಯಲಿದೆ. ಮನೆಯಲ್ಲಿ ಆಹಾರ ಸ್ಟಾಕ್ ಮಾಡಿಕೊಳ್ಳುವ ಅಗತ್ಯತೆ ಇಲ್ಲ. ಆಹಾರ ಸಮಸ್ಯೆ ಆಗದ ರೀತಿ ಸರ್ಕಾರ ಕ್ರಮ ವಹಿಸಿದೆ. ಎರಡು ತಿಂಗಳ ರೇಷನ್ ಅನ್ನು ಒಟ್ಟಿಗೆ ಕೊಡಲು ಸರ್ಕಾರ ತೀರ್ಮಾನ ಮಾಡಿದೆ ಎಂದರು.
1ರಿಂದ 6ನೇ ತರಗತಿಯವರಿಗೆ ಬೇಸಿಗೆ ರಜೆ ರಾಜ್ಯದ ಎಲ್ಲ ಶಾಲೆಗಳಿಗೂ ಅನ್ವಯ: ಶಿಕ್ಷಣ ಇಲಾಖೆಯ ಹೊಸ ಸುತ್ತೋಲೆ

ಪಾಲಕರೇ ಗೊಂದಲ ಬೇಡ; 1ರಿಂದ 6ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ- ಶಿಕ್ಷಣ ಸಚಿವರ ಪತ್ರಿಕಾಗೋಷ್ಠಿ ವಿಡಿಯೋ ನೋಡಿ

ಪ್ರಧಾನಿ ಮೋದಿ ಕರೆಕೊಟ್ಟಿರುವ ಜನತಾ ಕರ್ಪ್ಯೂಗೆ ರಾಜ್ಯದಲ್ಲಿ ಉತ್ತಮ ಆರಂಭ: ಇಡೀ ಕರ್ನಾಟಕವೇ ಸ್ತಬ್ಧ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 11 =
Remember me
