ಬೆಂಗಳೂರು:ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಸುಸೂತ್ರವಾಗಿ ಆರಂಭವಾಗಿದೆ. ಮೊದಲ ದಿನ ಶೇ.97.59 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಚಿಕ್ಕೋಡಿಯಲ್ಲಿ ಅಭ್ಯರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಬಂದಿದ್ದ ಆರು ಜನರು ಸಿಕ್ಕಿಬಿದ್ದಿದ್ದರೆ, ಬಾಗಲಕೋಟೆಯ ಇಳಕಲ್​ನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಸಿಗದೆ ವಾಪಸ್ ಹೋಗಿದ್ದಾಳೆ. ಹಿಜಾಬ್ ಧರಿಸಿ ಬಂದಲ್ಲಿ ಪರೀಕ್ಷಾ ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲವೆಂದು ಮೊದಲೇ ಹೇಳಿದ್ದರಿಂದ ಬಹುತೇಕ ಎಲ್ಲ ಕೇಂದ್ರಗಳಲ್ಲೂ ವಿದ್ಯಾರ್ಥಿಗಳು ಸಮವಸ್ತ್ರದಲ್ಲೇ ಆಗಮಿಸಿ ದ್ದಾರೆ. ಕೆಲವು ಕಡೆ ಮನೆಯಿಂದ ಹಿಜಾಬ್ ಧರಿಸಿ ಬಂದು ಶಾಲಾ ಆವರಣದಲ್ಲಿ ತೆಗೆದಿಟ್ಟು ಸಮವಸ್ತ್ರದಲ್ಲೇ ಪರೀಕ್ಷೆ ಬರೆದಿದ್ದಾರೆ. ಇನ್ನು ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜನೆ ಗೊಂಡಿದ್ದ ಶಿಕ್ಷಕರೊಬ್ಬರು ಹೃದಯಾ ಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ.
ಯಾವ ಕೇಂದ್ರಲ್ಲೂ ಅನಾಹುತ ನಡೆದಿಲ್ಲ. ಅನಾರೋಗ್ಯ ಕಾರಣದಿಂದಾಗಿ 336 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಉಳಿದ ವಿಷಯದ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಎದುರಿಸಬೇಕೆಂದು ಮನವಿ ಮಾಡುತ್ತೇನೆ.
|ಬಿ.ಸಿ. ನಾಗೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ
ವಿದ್ಯಾರ್ಥಿಗೆ ವಾಮಾಚಾರ?:ವಿಜಯಪುರದ ಅರಕೇರಿ ತಾಂಡಾ-1ರ ಬಳಿ ಪರೀಕ್ಷಾರ್ಥಿ ಸಚಿನ್ ನಾಯಕ ಎಂಬ ವಿದ್ಯಾರ್ಥಿಯ ಫೋಟೋಗೆ ಹೂವಿನ ಹಾರ ಹಾಕಿ ಗಡಿಗೆ, ಹಾಲ್ ಟಿಕೆಟ್ ಝುರಾಕ್ಸ್ ಪ್ರತಿ ಇಟ್ಟು ತೆಂಗಿನಕಾಯಿ ಒಡೆದು, ಪೂಜೆ ಮಾಡಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಪೋಷಕರು ವಾಮಾಚಾರದ ಭೀತಿ ವ್ಯಕ್ತಪಡಿಸಿದ್ದಾರೆ.
39 ವಿದ್ಯಾರ್ಥಿನಿಯರು ಗೈರು:ಮೈಸೂರುನಲ್ಲಿ ಹಿಜಾಬ್ ವಿವಾದವೂ ಸೇರಿ ನಾನಾ ಕಾರಣದಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ 39 ಮುಸ್ಲಿಂ ವಿದ್ಯಾರ್ಥಿನಿಯರು ಗೈರಾಗಿದ್ದರು.
ಜೇನು ದಾಳಿ:ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಪರೀಕ್ಷಾ ಕೇಂದ್ರದ ಕಟ್ಟಡದಲ್ಲಿ ಗೂಡು ಕಟ್ಟಿದ್ದ ಜೇನು ಹುಳುಗಳು ದಾಳಿ ಮಾಡಿ ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಕಚ್ಚಿದವು. ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಿ ಪರೀಕ್ಷೆ ಬರೆಯಲು ಹೆಚ್ಚುವರಿ ಸಮಯ ನೀಡಲಾಯಿತು.
ನಾಗಾಲೆಂಡ್​ನಿಂದ ಬಂದ ವಿದ್ಯಾರ್ಥಿ!:ನಾಗಾಲೆಂಡ್​ನಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕುಶಾಲ ನಗರದ ಎಚ್.ವಿ.ಚಿಂತನ್ ಸೋಮವಾರ ಬೆಳಗ್ಗೆ ವಿಮಾನದಲ್ಲಿ ಆಗಮಿಸಿ ಕೂಡಿಗೆಯ ಸರ್ಕಾರಿ ಕ್ರೀಡಾ ಶಾಲೆಯಲ್ಲಿ ಪರೀಕ್ಷೆ ಬರೆದಿದ್ದಾನೆ.
ಕಲರ್ ಡ್ರೆಸ್​ನಲ್ಲಿ ಬಂದರೂ ಅವಕಾಶ:ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಇಲ್ಲದೆ, ಕಲರ್ ಡ್ರೆಸ್​ನಲ್ಲಿ ಬಂದರೂ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಪರಿಷತ್​ನಲ್ಲಿ ಶೂನ್ಯವೇಳೆ ಕಾಂಗ್ರೆಸ್​ನ ಪ್ರಕಾಶ್ ರಾಥೋಡ್, ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಿರುವ ನಿಯಮವನ್ನು ಸಡಿಲ ಮಾಡುವಂತೆ ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಮೊದಲಿನಿಂದಲೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಒಂದು ವೇಳೆ ಸಮವಸ್ತ್ರ ಇಲ್ಲದಿದ್ದ ಪಕ್ಷದಲ್ಲಿ ಕಲರ್ ಡ್ರೆಸ್​ನಲ್ಲಿ ಬಂದರೂ ಅವಕಾಶ ನೀಡುತ್ತೇವೆ ಎಂದರು.
ಮುಖ್ಯಶಿಕ್ಷಕಗೆ ಹೃದಯಾಘಾತ:ಬಳ್ಳಾರಿ ನಗರದಲ್ಲಿ ಪರೀಕ್ಷಾ ಕರ್ತವ್ಯದಲ್ಲಿದ್ದ ಮುಖ್ಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಸವೇಶ್ವರ ನಗರದ ಸಿ.ಎಸ್.ಮುಧೋಳ್ (59) ಮೃತರು. ಇಲ್ಲಿನ ರಾಜ್ಯೋತ್ಸವ ನಗರದ ಎಸ್.ಎಂ.ವಿ.ವಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿದ್ದರು. ಬೆಳಗ್ಗೆ ಪರೀಕ್ಷಾ ಕರ್ತವ್ಯಕ್ಕೆ ಹಾಜರಾಗಿದ್ದು, ಮಧ್ಯಾಹ್ನ 1.50 ಸುಮಾರಿಗೆ ಶಾಲಾವರಣದಲ್ಲಿ ಹೃದಯಾಘಾತವಾಗಿದೆ. ಮೃತರಿಗೆ ಪತ್ನಿ, ಒಬ್ಬ ಪುತ್ರ, ಪುತ್ರಿ ಇದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
