ಬೆಂಗಳೂರುಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಅನುಮತಿ ನೀಡಿದೆ.
ಮಾ.25ರಿಂದ ಏ.6ರವರೆಗೆ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ತಾವು ಓದಿದ ಶಾಲೆ ಹೊರತಾಗಿ ಬೇರೆ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರ ನಿಗದಿ ಮಾಡಿರುವುದರಿಂದ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಬಸ್‌ನಲ್ಲಿ ಉಚಿತವಾಗಿ ಅವಕಾಶ ಕಲ್ಪಿಸಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕೋರಿತ್ತು.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರ ವಲಯ, ಸಾಮಾನ್ಯ ಮತ್ತು ವೇಗಧೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಇದನ್ನು ನಿಗಮದ ಎಲ್ಲ ಚಾಲಕರು, ನಿರ್ವಾಹಕರು ಗಮನದಲ್ಲಿಟ್ಟು ಮಕ್ಕಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದೆ. ಇದಲ್ಲದೆ, ಅವಶ್ಯಕವಿದ್ದಲ್ಲಿ ವಿದ್ಯಾರ್ಥಿಗಳಿಗೆ ಕೋರಿಕೆ ನಿಲುಗಡೆಗೂ ಕ್ರಮವಹಿಸಬೇಕೆಂದು ತಿಳಿಸಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:sixteen − ten =
Remember me
