ಬೆಂಗಳೂರು: ಕರೊನಾ ಮಹಾಮಾರಿಯ ಅಟ್ಟಹಾಸ ಹಾಗೂ ಪರ, ವಿರೋಧಗಳ ಜಿಜ್ಞಾಸೆ ನಡುವೆಯೇ ರಾಜ್ಯದಲ್ಲಿ ಗುರುವಾರ 2020ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಾಮಾಜಿಕ ಅಂತರ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜೂ.25ರಿಂದ ಜು.4ರವರೆಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ.
ಪ್ರಸಕ್ತ ವರ್ಷ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 2,879 ಪರೀಕ್ಷಾ ಕೇಂದ್ರಗಳ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 330 ಹೆಚ್ಚುವರಿ ಕೇಂದ್ರಗಳನ್ನು ರಚಿಸಲಾಗಿದೆ. ಈ ಪೈಕಿ 57 ಸೂಕ್ಷ್ಮ ಪರೀಕ್ಷಾ ಕೇಂದ್ರ, 4 ಅತಿ ಸೂಕ್ಷ್ಮ ಕೇಂದ್ರ, 2818 ಸಾಮಾನ್ಯ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ನೋಡಲ್ ಅಧಿಕಾರಿಗಳು, ಸ್ಥಾನಿಕ ಜಾಗೃತ ದಳ, ಕೊಠಡಿ ಮೇಲ್ವಿಚಾರಕರು, ಮೊಬೈಲ್ ಸ್ವಾಧೀನಾಧಿಕಾರಿ ಹಾಗೂ18 ರೀತಿಯ ವಿವಿಧ ಅಧಿಕಾರಿಗಳು ಸೇರಿದಂತೆ 81,265 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಜಿಲ್ಲಾಧಿಕಾರಿ, ಸಿಇಒ, ಖಜಾನಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ 19,222 ಅಧಿಕಾರಿಗಳು ಪರೀಕ್ಷಾ ಕಾರ್ಯ ನಿರ್ವಹಿಸಲಿದ್ದಾರೆ.
ಇದನ್ನೂ ಓದಿ:ವಾರ ಮೊದಲೇ ಎಸ್​ಎಸ್​ಎಲ್​ಸಿ ಪರೀಕ್ಷಾರ್ಥಿಗಳ ಆರೋಗ್ಯ ತಪಾಸಣೆ
6418-ಮಂದಿ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ12,674-ವಲಸೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ7115-ಥರ್ಮಲ್ ಸ್ಕ್ಯಾನರ್​ಗಳನ್ನು ನೀಡಿದೆ236 –ಹೆಲ್ಪ್ ಡೆಸ್ಕ್​ಗಳನ್ನು ತೆರೆದಿದೆ
ಹೆಚ್ಚುವರಿ ಕೇಂದ್ರ: ರಾಜ್ಯದ ಪ್ರತಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳ ಪರೀಕ್ಷಾ ಕೇಂದ್ರಗಳಲ್ಲಿ ಕನಿಷ್ಠ ಎರಡು ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ‘ಕಾಯ್ದಿರಿಸಿದ ಪರೀಕ್ಷಾ ಕೇಂದ್ರ’ಗಳಾಗಿ ಮೀಸಲಿಡುವಂತೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಸೂಚನೆ ನೀಡಿದೆ.ಕೊರೊನಾ ಪ್ರಕರಣಗಳು ವರದಿಯಾಗಿ ಯಾವುದೇ ಪರೀಕ್ಷಾ ಕೇಂದ್ರ ಕಂಟೈನ್ಮೆಂಟ್ ವಲಯದೊಳಗೆ ಬಂದರೆ ಆಗ ಪರೀಕ್ಷಾ ಕೇಂದ್ರವನ್ನು ಈಗಾಗಲೇ ಗುರುತಿಸಿರುವ ‘ಕಾಯ್ದಿರಿಸಿದ ಪರೀಕ್ಷಾ ಕೇಂದ್ರ’ಕ್ಕೆ ಸ್ಥಳಾಂತರಿಸಬೇಕಾಗುತ್ತದೆ. ಅಂದರೆ, ಯಾವುದೇ ಪರೀಕ್ಷಾ ಕೇಂದ್ರವು ಕಂಟೇನ್ಮೆಂಟ್ ವಲಯದಲ್ಲಿ ಇರದಂತೆ ನೋಡಿಕೊಳ್ಳುವಂತೆ ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.
ಇದನ್ನೂ ಓದಿ:ಆತ್ಮಹತ್ಯೆಗಳ ಹಿಂದಿದೆಯಂತೆ ಸೈನ್ಸ್​! – ಒಮ್ಮೆ ಓದಿ ನೋಡಿ..
ವಿಶೇಷ ಕೊಠಡಿಗಳು ಕಾಯ್ದಿರಿಸಿ:ಇದರ ಜತೆಗೆ ಕೆಮ್ಮು, ನೆಗಡಿ ಮತ್ತು ಜ್ವರದಿಂದ ಬಳಲುತ್ತಿರುವ ಅಥವಾ ಕಂಟೇನ್ಮೆಂಟ್ ವಲಯದಿಂದ ಬಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಸುವುದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿಯೂ ಕನಿಷ್ಠ ಎರಡು ಕೊಠಡಿಗಳನ್ನು ‘ವಿಶೇಷ ಕೊಠಡಿ’ಗಳೆಂದು ಕಾಯ್ದಿರಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳನ್ನು ಸ್ಥಳೀಯ ಸಂಸ್ಥೆಗಳ ಮೂಲಕ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಬೇಕು. ಪ್ರತಿ ಪೀಠೋಪಕರಣಗಳನ್ನು ಸ್ಯಾನಿಟೈಸ್ ಮಾಡಬೇಕು. ಕನಿಷ್ಠ ಒಂದು ಮೀಟರ್ ಅಂತರ ಕಾಪಾಡಿಕೊಂಡು ಕೊಠಡಿಯಲ್ಲಿ ಕನಿಷ್ಠ 18ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ ಮಾಡಬೇಕು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವ ಸುರೇಶ್‌ಕುಮಾರ್ ವಿರುದ್ಧ ಕೋರ್ಟ್‌ಗೆ ದೂರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × one =
Remember me
